Breaking News
Home / new delhi / ಜನಸಾಮಾನ್ಯರ ಭಾವನೆಗಳಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ: ಸಚಿವ ಡಾ.ಕೆ.ಸುಧಾಕರ್

ಜನಸಾಮಾನ್ಯರ ಭಾವನೆಗಳಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ: ಸಚಿವ ಡಾ.ಕೆ.ಸುಧಾಕರ್

Spread the love

ನಾಳೆ ನಡೆಯಲಿರುವ ಸಭೆಯಲ್ಲಿ ವೈಜ್ಞಾನಿಕ ನೆಲೆಗಟ್ಟಿನಲ್ಲಿಯೇ ಮುಖ್ಯಮಂತ್ರಿಗಳು ಎಲ್ಲರ ಸಲಹೆ ಪಡೆದುಕೊಳ್ಳುತ್ತಾರೆ. ಜನಸಾಮಾನ್ಯರನ್ನು ಯಾವುದೇ ರೀತಿ ಸಂಕಷ್ಟದಲ್ಲಿ ಸಿಲುಕಿಸಲು ಮತ್ತು ಅವರ ಭಾವನೆಗಳಿಗೆ ವಿರೋಧ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಹೈವೋಲ್ಟೇಜ್ ಕೋವಿಡ್ ಸಭೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಜನರ ಹಿತ ದೃಷ್ಟಿಯಲ್ಲಿ, ಆರೋಗ್ಯದ ಹಿತ ದೃಷ್ಟಿಯಲ್ಲಿ ಏನು ಅವಶ್ಯಕವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಯಾವ ರೀತಿ ಕೊರೊನಾ ನಿಯಂತ್ರಣ ಮಾಡಬೇಕು ಎಂಬುದಷ್ಟೇ ನಮ್ಮ ಮುಂದಿದೆ. ಅನಿವಾರ್ಯ ಪರಿಸ್ಥಿತಿಯಲ್ಲಿ ಕೆಲವು ಕ್ರಮ ತೆಗೆದುಕೊಂಡಿದ್ದಾರೆ ಅದನ್ನು ಬಿಟ್ಟು ಜನರಿಗೆ ತೊಂದರೆ ಕೊಡುವುದರಿಂದ ಸರ್ಕಾರಕ್ಕೆ ಆದಯವೂ ಇಲ್ಲ, ಏನೂ ಇಲ್ಲ ಎಂದರು.ಈಗಾಗಲೇ ತಜ್ಞರು ವರದಿ ಕೊಟ್ಟಿದ್ದಾರೆ. ಒಂದು ದಿನಕ್ಕೆ 60 ಸಾವಿರ ಕೇಸ್‍ಗಳಿಂದ 1 ಲಕ್ಷ 20 ಸಾವಿರ ಪಾಸಿಟಿವ್ ಕೇಸ್‍ಗಳು ಬರುತ್ತವೆ ಎಂದು ಹೇಳಿದ್ದಾರೆ. ಇನ್ನು ಹೋಮ್ ಐಸೋಲೇಶನ್ ಕಿಟ್‍ಗಳನ್ನು ಬೆಂಗಳೂರಿನಲ್ಲಿ ತಕ್ಷಣವೇ ಕೊಡಲು ಪ್ರಾರಂಭ ಮಾಡಿದ್ದೇವೆ. ಅದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೊಡಲು ಬರುವ ಎರಡ್ಮೂರು ದಿನಗಳಲ್ಲಿ ಪ್ರಾರಂಭ ಮಾಡುತ್ತೇವೆ ಎಂದರು.


Spread the love

About Laxminews 24x7

Check Also

ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

Spread the love ಕಲಬುರಗಿ: ನಗರದಲ್ಲಿ ಮಂಗಳವಾರ ಬೆಳಗ್ಗೆ ಹಿಂದೂ ಜಾಗೃತಿ ಸೇನೆಯ ಕಾರ್ಯಕರ್ತರು ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ