Breaking News

ಬೆಳಗಾವಿಗೆ ಡಾ.ಯತೀಂದ್ರ ಸಿದ್ದರಾಮಯ್ಯ ಆಗಮನ

Spread the love

ಬೆಳಗಾವಿ: ಇಲ್ಲಿ ಸುವರ್ಣ ವಿಧಾನಸೌಧದಲ್ಲಿ ಜು.28ರಂದು ಬೆಳಗ್ಗೆ 10.30ಕ್ಕೆ ಜರುಗಲಿರುವ ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬಿಡಾ)ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ ನಗರಕ್ಕೆ  ಆಗಮಿಸಲಿದ್ದಾರೆ.’
ಜು.28ರಂದು ಬೆಳಗ್ಗೆ 6.25ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಬೆಳಗ್ಗೆ 8 ಗಂಟೆಗೆ ರಸ್ತೆ ಮಾರ್ಗವಾಗಿ ಬೆಳಗಾವಿ ಮಹಾನಗರಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿ ಸಂಜೆ 5 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ಸ್ಥಳೀಯ ಮುಂಖಡರೊಂದಿಗೆ ಸಭೆ ನಡೆಸಲಿ ವಾಸ್ತವ್ಯ ಹೂಡಲಿದ್ದಾರೆ. ಜು.29ರಂದು ಬೆಳಗ್ಗೆ  8.50 ಬೆಳಗಾವಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ