Breaking News

ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

Spread the love

ದಾವಣಗೆರೆ: ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ರಾತ್ರಿ ಒಂದು ಗಂಟೆ ಸುಮಾರಿಗೆ ನಿಟ್ಟುವಳ್ಳಿ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಇರುವ ದೇವಸ್ಥಾ‌ನದಲ್ಲಿ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ.

ಖದೀಮರು ದೇವಸ್ಥಾ‌ನದ ಹುಂಡಿ ಹೊಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು ಒಂದು ಲಕ್ಷ ಹಣ ಕಳ್ಳತನವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಶ್ವಾನದಳ, ಬೆರಳಚ್ಚು ತಜ್ಞರಿಂದ ದೇವಸ್ಥಾನದ ಪರಿಶೀಲನೆ ನಡೆಯುತ್ತಿದೆ.

 

ಇನ್ನು ಕೆಟಿಜೆ ನಗರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಕಳೆದ ವಾರ ಇದೇ ಪ್ರದೇಶದ ಕೊಟ್ಟೂರೇಶ್ವರ ದೇವಸ್ಥಾನ ಹಾಗೂ ಒಂದು ಮನೆ ಕಳುವಾಗಿತ್ತು. ಇಂದು ಆಂಜನೇಯ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

ಸದ್ಯ ಕಳ್ಳರಿಗಾಗಿ ಕೆಟಿಜೆ ನಗರ ಠಾಣೆ ಪೋಲೀಸರು ಪತ್ತೆಗಾಗಿ ಜಾಲ ಬೀಸಿದ್ದಾರೆ.


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Spread the love ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ