Breaking News

ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ ಮಲ್ಲಪ್ಪ ನಿಧನ

Spread the love

ದಾವಣಗೆರೆ: ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ನಿಧನರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೆ.ಮಲ್ಲಪ್ಪನವರು ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕ ಹಾಗೂ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರು ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಮಲ್ಲಪ್ಪ ಅಹಿಂದಾ ಸಂಘಟನೆಯ ಪ್ರಮುಖ ರೂವಾರಿ. ಇವರು ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನ ಅಗಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ