Breaking News

ಯಡಿಯೂರಪ್ಪ ಪರೋಕ್ಷವಾಗಿ ಏಪ್ರಿಲ್ ‌ 15ರಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಸುಳಿವು

Spread the love

ಬೆಂಗಳೂರು: ಲಾಕ್​ಡೌನ್​ನಿಂದಾಗಿ 22 ದಿನಗಳಿಂದ ರಾಜ್ಯದೆಲ್ಲೆಡೆ ಮಾಲ್, ಬಾರ್, ಪಬ್​ಗಳನ್ನು ಮುಚ್ಚಲಾಗಿತ್ತು. ಆದರೆ ಇದೀಗ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಡುವ ಸಾಧ್ಯತೆಯಿದೆ.
ಲಾಕ್​ಡೌನ್​ ಅನ್ನು ಏ. 30ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ ನಂತರ ಇನ್ನೂ 18 ದಿನ ಸಾರಾಯಿ ಸಿಗುವುದಿಲ್ಲ ಎಂಬ ನಿರಾಸೆ ಮದ್ಯಪ್ರಿಯರನ್ನು ಕಾಡಿತ್ತು. ಆದರೆ, ಈ ಬಗ್ಗೆ ಸದ್ಯದಲ್ಲೇ ಘೋಷಿಸಲಿರುವ ರಾಜ್ಯ ಸರ್ಕಾರ ಬುಧವಾರದಿಂದಲೇ ಸಾರಾಯಿ ಮಾರಾಟಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಹೆಚ್ಚಾಗಿದೆ.ರಾಜ್ಯದಲ್ಲಿ ಹದಗೆಟ್ಟಿರುವ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಈ ಹೆಜ್ಜೆಯನ್ನು ‌ತೆಗೆದುಕೊಳ್ಳಲಾತ್ತಿದೆ.
ನಾಳೆ ಅಂಬೇಡ್ಕರ್ ಜಯಂತಿ ಇರುವುದರಿಂದ ನಾಡಿದ್ದು ಅಂದರೆ ಬುಧವಾರದಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುವುದು. ಎಂಎಸ್​ಐಎಲ್​ ಮೂಲಕ ಮದ್ಯ ಮಾರಾಟ ಮಾಡಲು ಸರ್ಕಾರ ತೀರ್ಮಾನ ಮಾಡಿದೆ. ಇಂದಿನ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಸುಳಿವು ನೀಡಿದ್ದಾರೆ.
ಏಪ್ರಿಲ್ 14ರ ನಂತರ ಮದ್ಯ ಮಾರಾಟದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದಿರುವ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಏಪ್ರಿಲ್ ‌ 15ರಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ. ಹೀಗಾಗಿ, ಬುಧವಾರದಿಂದಲೇ ಮದ್ಯ ಮಾರಾಟ ಖಚಿತ ಎನ್ನಲಾಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ