Breaking News

ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕಿಂಗ್​ ಸುದ್ದಿ ಮದ್ಯ ಮಾರಾಟದ ಮೇಲಿನ ನಿರ್ಬಂಧ ಏಪ್ರಿಲ್ 14ರವರೆಗೆ ಮುಂದುವರಿಯಲಿದೆ.

Spread the love

ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕಿಂಗ್​ ಸುದ್ದಿಯನ್ನು ಕೊಟ್ಟಿದೆ. ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಏಪ್ರಿಲ್ 14 ರವರೆಗೆ ಮದ್ಯ ಮಾರಾಟ ಬಂದ್​​ ಮಾಡಿ ಆದೇಶ ಹೊರಡಿಸಿದೆ. 
ಅಬಕಾರಿ ಇಲಾಖೆ ಆಯುಕ್ತರು ಮಾರ್ಚ್​ 21 ಹೊರಡಿಸಿದ್ದ ಆದೇಶದ ಪ್ರಕಾರ ಮಾರ್ಚ್​ 31ರ ಮಧ್ಯರಾತ್ರಿಗೆ ಮದ್ಯ ಮಾರಾಟ ನಿಷೇಧ ಅಂತ್ಯವಾಗಲಿತ್ತು. ಆದರೆ, ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ  ಹಿನ್ನೆಲೆಯಲ್ಲಿ ಮದ್ಯ ಮಾರಾಟದ ಮೇಲಿನ ನಿರ್ಬಂಧ ಏಪ್ರಿಲ್ 14ರವರೆಗೆ ಮುಂದುವರಿಯಲಿದೆ. ನಾಳೆಯಿಂದ ಎಣ್ಣೆ ಸಿಗಲಿದೆ ಎಂದು ಖುಷಿಯದಲ್ಲಿದ್ದ ಮದ್ಯಪ್ರಿಯರಿಗೆ ಈ ಆದೇಶ ತೀವ್ರ ನಿರಾಸೆ ಮೂಡಿಸಿದೆ.
ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಮದ್ಯದ ಅಂಗಡಿಗಳು ತೆರೆದಿದ್ದರೆ ಅದಕ್ಕೆ ಅಬಕಾರಿ ಉಪ ಆಯುಕ್ತರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅಬಕಾರಿ ಇಲಾಖೆ ಆಯುಕ್ತರು ಎಚ್ಚರಿಕೆಯನ್ನು ನೀಡಿದ್ದಾರೆ.
ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ವಾರದಿಂದ ಮದ್ಯ ಸಿಗದ ಕಾರಣ ರಾಜ್ಯದಲ್ಲಿಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶ

Spread the loveಬೆಳಗಾವಿ: ಮಹಾನಗರ ಪಾಲಿಕೆಯ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪತ್ನಿಯರ ಹೆಸರಿನಲ್ಲಿ ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ