Breaking News

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

Spread the love

ದಾವಣಗೆರೆ: ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿ ಹೊರಡಿಸಲಾಗಿದ್ದ ಆನ್‍ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5 ರವರೆಗೆ ವಿಸ್ತರಿಸಲಾಗಿದೆ.

2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಪರಿಶಿಷ್ಟ ಜಾತಿ/ಪಂಗಡ ವರ್ಗದ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ ವಸತಿ ಶಾಲೆಗಳಿಗೆ ಪ್ರವೇಶಕ್ಕೆ ಆ.25 ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ ಅಭ್ಯರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ದಿನಾಂಕ ವಿಸ್ತರಣೆ ಮಾಡಲಾಗಿದೆ.

5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಮೀಪದ ವಸತಿ ಶಾಲೆಗಳಲ್ಲಿ (ಕ್ವಾರಂಟೈನ್ ಸೆಂಟರ್/ಕೋವಿಡ್ ಕೇರ್ ಸೆಂಟರ್ ಹೊರತುಪಡಿಸಿ) ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಶಾಲಾ ದೃಢೀಕರಣ ಪತ್ರ, ಶಾಲಾ ಎಸ್‍ಟಿಎಸ್ ನಂಬರ್ ಹಾಗೂ ವಿದ್ಯಾರ್ಥಿಯ ಮತ್ತು ತಂದೆಯ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ