Breaking News

ಬರ ಪರಿಸ್ಥಿತಿ ಗಂಭೀರವಾಗ್ತಿದೆ, ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ – ರೈತರಿಗೆ ಡಿಕೆಶಿ ಮನವಿ

Spread the love

ಬೆಂಗಳೂರು: ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗ್ತಿದೆ ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬಾರದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ , ಘಟ್ಟಪ್ರಭಾ, ಮಲಪ್ರಭಾ, ನಾರಾಯಣಪುರ, ವಾಣಿವಿಲಾಸ ಅಣೆಕಟ್ಟೆಗಳ ಒಳಹರಿವಿನ ಪ್ರಮಾಣ ಶೂನ್ಯವಾಗಿದೆ ಎಂದು ತಿಳಿಸಿದರು.

ಕಾವೇರಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಕುಸಿದಿದೆ. ಕಳೆದ ವರ್ಷ ಈ ಸಮಯದಲ್ಲಿ ಹೇಮಾವತಿಯಲ್ಲಿ 80 ಅಡಿ ನೀರು ಇತ್ತು. ಈ ವರ್ಷ 40 ಅಡಿಗೆ ಕುಸಿದಿದೆ. ಕೆಆರ್‌ಎಸ್‌ನಲ್ಲಿ 100 ಅಡಿ ಇದ್ದ ನೀರಿನ ಪ್ರಮಾಣ ಈಗ 22 ಅಡಿಯಷ್ಟಿದೆ, ಕಬಿನಿಯಲ್ಲಿ 79 ಅಡಿ ಇತ್ತು, ಈಗ 26 ಅಡಿಯಷ್ಟು ನೀರು ಇದೆ. ಈ ಅಣೆಕಟ್ಟೆಗಳಲ್ಲಿ ಒಳಹರಿವಿನ ಪ್ರಮಾಣ 20% ಗೆ ಕುಸಿದಿದೆ. ಹೀಗಾಗಿ ಸಮಸ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವಿವರಿಸಿದರು.

ನೀರು ಬಿಡುವ ವಿಚಾರದಲ್ಲಿ ರೈತರು ಒತ್ತಡ ಹಾಕಬೇಡಿ. ಮುಂದಿನ ದಿನಗಳಲ್ಲಿ ಮಳೆ ಗಮನದಲ್ಲಿಟ್ಟುಕೊಂಡು ಬೆಳೆ ಹಾಕಿ. ಮಳೆ ಬಂದರೆ ನಾವು ನೀರನ್ನು ಒದಗಿಸಿಕೊಡುತ್ತೇವೆ. ಬರದ ಪರಿಸ್ಥಿತಿ ಎದುರಿಸಲು ಸಚಿವರಿಗೆ 2-3 ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದ್ದು, ನಾನು 4 ವಿಭಾಗಗಳಿಗೆ ತೆರಳಿ ಪರಿಶೀಲನೆ ಮಾಡುತ್ತೇನೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿಯವರು ಈಗಾಗಲೇ ನೀರು ಹಾಗೂ ವಿದ್ಯುತ್ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲೇ ಭೀಕರ ಬರಗಾಲ ಬರಲಿದೆ ಎಂದು ಕೇಂದ್ರ ಸರ್ಕಾರ ಸಂದೇಶ ನೀಡಿದೆ. ವಿದ್ಯುತ್ ವಿಚಾರವಾಗಿ ಇಂಧನ ಇಲಾಖೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಾವು ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ಮೇವು ಹಾಗೂ ಕುಡಿಯುವ ನೀರಿನ ವಿಚಾರವಾಗಿ ಜಿಲ್ಲಾ ಸಚಿವರಿಗೆ ಪ್ರವಾಸ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ತುರ್ತಾಗಿ ಕೊಳವೆ ಬಾವಿ ಕೊರೆಯಲು ಸೂಚಿಸಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಶೀಲ ಶಂಕಿಸಿ ಪತಿಯಿಂದ ಪತ್ನಿಯ ಭೀಕರ ಹತ್ಯೆ

Spread the loveಮಂಡ್ಯ: ಪತ್ನಿಯ ಶೀಲ ಶಂಕಿಸಿ ಪತಿಯೇ  ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ