Breaking News

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ

Spread the love

ಬೆಂಗಳೂರು: ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್​​ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್  ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತ್ರ, ಮೈಸೂರಿನಲ್ಲಿ ಪತ್ತೆಯಾಗಿರುವುದು ಫಿನಾಯಿಲ್ ಫ್ಯಾಕ್ಟರಿ. ಅಲ್ಲಿ ಡ್ರಗ್ಸ್ ತಯಾರು ಮಾಡುವ ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಕ ಮಾಧ್ಯಮ ಎಕ್ಸ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅಶೋಕ್, ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ‘ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ’ ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಪರಮೇಶ್ವರ್ ಉಡಾಫೆ ಉತ್ತರ ಕೊಟ್ಟಿದ್ದರು ಎಂದು ಅಶೋಕ್ ಹೇಳಿದ್ದಾರೆ.

ಅಶೋಕ್ ಎಕ್ಸ್ ಸಂದೇಶ

R Ashoka Tweet

ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಹಾಕಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಈ ಡ್ರಗ್ಸ್ ದಂಧೆಯನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ