Breaking News

ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!

Spread the love

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್..

ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದವರನ್ನು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರಿನ ಉಮರ್ (32), ನಜೀರ್ (35), ನವೀದ್(32), ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್ (30), ಮಹಮ್ಮದ್ ಗೌಸ್ (32), ಮಹಮ್ಮದ್ ಇಕ್ಬಾಲ್ (28) ಬಂಧಿತ ಆರೋಪಿಗಳಾಗಿದ್ದಾರೆ.

ಈ ಆರೋಪಿಗಳು ತುಮಕೂರು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜು ಬಳಿ ನಿಂತುಕೊಂಡು ಮಾದಕ ಮಾತ್ರೆಗಳ ಮಾರಾಟಕ್ಕೆ ಯತ್ನಿಸುತ್ತಿದ್ದರು.

Tapedac.100mg, ಹಾಗೂ Tydel-100 mg (Tapentadol Tablets) ಗಳನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ಬಳಿಯಿದ್ದ 100 ಕ್ಕಿಂತ ಹೆಚ್ಚು ಮಾದಕ ಮಾತ್ರೆಗಳನ್ನ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ವಿರುದ್ಧ NDMA ಆಕ್ಟ್ ಅಡಿಯಲ್ಲಿ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ