Breaking News

ಕುಡಿದ ಮತ್ತಿನಲ್ಲಿ ಪೆಟ್ರೋಲ್ ಬಂಕ್‌ಗೆ ಜಾಗ್ವಾರ್ ಡಿಕ್ಕಿ – ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು, ಬಂಕ್‌

Spread the love

ಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗವಾಗಿ ಬಂದ ಜಾಗ್ವಾರ್ ಕಾರೊಂದು ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಹಾಗೂ ಪೆಟ್ರೋಲ್ ಪಂಪ್ ಕ್ಷಣಾರ್ಧದಲ್ಲಿ ಬೆಂಕಿಗೆ ಆಹುತಿಯಾದ ಭೀಕರ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ ನಡೆದಿದೆ.

ಅತ್ತಿಬೆಲೆಯ ಹೆಚ್‌ಪಿ  ಪೆಟ್ರೋಲ್ ಬಂಕ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಂಜಯ್ ಎಂಬಾತ ಯುವತಿಯೊಬ್ಬಳ ಜೊತೆ ಜಾಗ್ವಾರ್ ಕಾರಿನಲ್ಲಿ ಬಂದಿದ್ದು, ಕುಡಿದ ಮತ್ತಿನಲ್ಲಿ ಏಕಾಏಕಿ ಕಾರನ್ನು ಪೆಟ್ರೋಲ್ ಬಂಕ್ ಸಿಬ್ಬಂದಿ ಗುಡ್ಡು ಕುಮಾರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಪೆಟ್ರೋಲ್ ಪಂಪ್‌ಗೆ ರಭಸವಾಗಿ ಅಪ್ಪಳಿಸಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಿಡಿ ಹೊತ್ತಿಕೊಂಡು ಕ್ಷಣಾರ್ಧದಲ್ಲೇ ಕಾರು ಹಾಗೂ ಪೆಟ್ರೋಲ್ ಪಂಪ್‌ಗೆ ಬೆಂಕಿ ವ್ಯಾಪಿಸಿದೆ. ಕಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಯುವಕ ಹಾಗೂ ಯುವತಿ ತಕ್ಷಣವೇ ಕಾರಿನಿಂದ ಕೆಳಗೆ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಗಾಯಗೊಂಡ ಪೆಟ್ರೋಲ್ ಬಂಕ್ ಸಿಬ್ಬಂದಿ ಗುಡ್ಡು ಕುಮಾರ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಎಲೆಕ್ಟ್ರಾನಿಕ್ ಸಿಟಿ, ಆನೇಕಲ್ ಹಾಗೂ ತಮಿಳುನಾಡಿನ ಹೊಸೂರು ಭಾಗದಿಂದ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿ ಭಾರೀ ದುರಂತವನ್ನು ತಪ್ಪಿಸಿವೆ.

ಘಟನೆ ಸಂಬಂಧ ಕಾರು ಚಾಲನೆ ಮಾಡುತ್ತಿದ್ದ ಸಂಜಯ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಕೇಸ್‌- ಸುಪ್ರೀಂನಲ್ಲೂ ದರ್ಶನ್‌ಗೆ ಬಿಗ್‌ ಶಾಕ್‌

Spread the loveನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ  ಮತ್ತೊಂದು ಭಾರಿ ಕಾನೂನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ