Breaking News

ʻನನಗೆ ನ್ಯಾಯ ಬೇಕುʼ ಎಂದು ಹೈ ವೋಲ್ಟೇಜ್ ವಿದ್ಯುತ್ ಕಂಬ ಏರಿದ ಕುಡುಕ; 4 ಗಂಟೆ ಬಳಿಕ ರಕ್ಷಣೆ

Spread the love

ವಿಜಯಪುರ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೈ ವೋಲ್ಟೇಜ್  ವಿದ್ಯುತ್ ಟವರ್ ಏರಿ ಹುಚ್ಚಾಟ ಮೆರೆದ ಘಟನೆ ವಿಜಯಪುರ ನಗರದ ಬೇಗಂ ತಲಾಬ್ ಬಳಿ ನಡೆದಿದೆ.

ವಿಜಯಪುರ ತಾಲೂಕಿನ ಕೌಜಲಗಿ ತಾಂಡಾ ನಿವಾಸಿ ರವಿ ರಾಠೋಡ ಎಂಬಾತ ಮದ್ಯ ಸೇವಿಸಿ ಅಮಲಿನಲ್ಲಿ 110 ಕೆವಿ ಸಾಮರ್ಥ್ಯದ ವಿದ್ಯುತ್ ಟವರ್ ಏರಿದ್ದಾನೆ. ಶಿವಗಿರಿಯ 220 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿಜಯಪುರ ನಗರಕ್ಕೆ ಸರಬರಾಜಾಗುವ 110 ಕೆವಿ ವಿದ್ಯುತ್ ಲೈನ್‌ನ ಟವರ್ ಇದಾಗಿದೆ.

ಸಂಜೆ ಏಕಾಏಕಿ ಟವರ್ ಏರಿದ ರವಿ, ಮೇಲಿಂದ ಕೂಗಾಡುತ್ತಾ ಗಲಾಟೆ ಮಾಡಿದ್ದಾನೆ. ‘ನನಗೆ ನ್ಯಾಯ ಬೇಕು’ ಎಂದು ಕೂಗುತ್ತಿದ್ದ.

ಇದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಜಲನಗರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದಾರೆ.

ಟವರ್‌ನಿಂದ ರವಿಯನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸುಮಾರು ನಾಲ್ಕು ಗಂಟೆಗಳ ಕಾಲ ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಆತನನ್ನು ಕೆಳಗೆ ಕರೆತರಲಾಗಿದೆ.

ಘಟನಾ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಜಮಾಯಿಸಿದ್ದರಿಂದ ಕೆಲಕಾಲ ಸ್ಥಳದಲ್ಲಿ ಕುತೂಹಲದ ವಾತಾವರಣ ನಿರ್ಮಾಣವಾಗಿತ್ತು.

ಕೆಳಗೆ ಇಳಿಸಿದ ಬಳಿಕ ರವಿಯನ್ನು ಪೊಲೀಸರು ಪ್ರಾಥಮಿಕ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನೆ ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ಮೈಸೂರು ದಸರಾ – ಯತೀಂದ್ರ ಅಬ್ಬರಕ್ಕೆ ಡಿಕೆಶಿ ಬ್ರೇಕ್‌!

Spread the loveಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆರಂಭದ ಹೊಸ್ತಿಲಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಂತೆ ಕಾಣುತ್ತಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ