Breaking News

ದುನಿಯಾ ವಿಜಯ್ – ನಾಗರತ್ನ ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು; 2 ಕೋಟಿ ಜೀವನಾಂಶಕ್ಕೆ ಆದೇಶ

Spread the love

ನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್  ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿದೆ.

ಹಲವು ವರ್ಷಗಳಿಂದ ಕೋರ್ಟ್ ಅಂಗಳದಲ್ಲಿದ್ದ ವಿಚ್ಛೇದನ ಪ್ರಕರಣವನ್ನ ಇತ್ಯರ್ಥಪಡಿಸಿರುವ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ, ದಂಪತಿಗೆ ಅಧಿಕೃತವಾಗಿ ವಿಚ್ಛೇದನ ಮಂಜೂರು ಮಾಡಿದೆ.

ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್‌ ಹಾಗೂ ಪತ್ನಿ ನಾಗರತ್ನಾ ಅವರಿಗೆ ನ್ಯಾ. ಡಿಕೆ ಸಿಂಗ್ ಹಾಗು ಶಾಂತಿಭೂಷಣ್ ಅವರ ವಿಭಾಗೀಯ ಪೀಠ ಡಿವೋರ್ಸ್‌ ಮಂಜೂರು ಮಾಡಿದ್ದು, ಪತ್ನಿಗೆ 2 ಕೋಟಿ ರೂ. ಜೀವನಾಂಶ ನೀಡಲು ಆದೇಶಿಸಿದೆ.

ಮುಂದಿನ ಮೂರು ತಿಂಗಳ ಒಳಗೆ ಒನ್‌ಟೈಮ್‌ ಸೆಟಲ್‌ಮೆಂಟ್‌ ಆಗಿ ನಾಗರತ್ನ ಅವರಿಗೆ ಜೀವಾಂಶ ನೀಡುವಂತೆ ಹಾಗೂ ಮೂರು ಮಕ್ಕಳ ಸಂಪೂರ್ಣ ಜವಾಬ್ದಾರಿಯನ್ನ ದುನಿಯಾ ವಿಜಯ್‌ ಅವರೇಹೊರುವಂತೆ ಕೋರ್ಟ್‌ ಆದೇಶಿಸಿದೆ.

ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಕೌಟುಂಬಿಕ ಭಿನ್ನಾಭಿಪ್ರಾಯಗಳು ಈ ಹಿಂದೆ ಪೊಲೀಸ್ ಠಾಣೆ ಹಾಗೂ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಈ ಹಿಂದೆ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಅರ್ಜಿಯನ್ನ ತಿರಸ್ಕರಿಸಿತ್ತು. ಕೌಟುಂಬಿಕ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ವಿಜಯ್‌ ಹೈಕೋರ್ಟ್ ಮೊರೆ ಹೋಗಿದ್ದರು.

ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ದಂಪತಿಗಳು ಮತ್ತೆ ಒಂದಾಗಿ ಬಾಳಲು ಸಾಧ್ಯವಿಲ್ಲ ಎಂಬ ಅಂಶವನ್ನು ಗಮನಿಸಿ, ಷರತ್ತುಬದ್ಧ ವಿಚ್ಛೇದನ ನೀಡಿತು. ದುನಿಯಾ ವಿಜಯ್ ಪರ ಹಿರಿಯ ವಕೀಲರಾದ ಎಸ್. ಶ್ರೀವತ್ಸ ಮತ್ತು ಯುಕ್ತ ಅನಿಲ್ ವಾದ ಮಂಡಿಸಿದ್ರು.


Spread the love

About Laxminews 24x7

Check Also

ಕಲಬುರಗಿಯಲ್ಲಿ ಭೀಕರ ಅಪಘಾತ – ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು

Spread the loveಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ  ತಾಯಿಯೊಂದಿಗೆ ಮೂರು ತಿಂಗಳ ಮಗು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ