ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಗೆ ಇಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಸೇರಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.
ತಲ್ವಾರ್ ನಲ್ಲಿ ಕೇಕ್ ಕತ್ತರಿಸೋ ಮೂಲಕ ದುನಿಯಾ ವಿಜಯ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕಾನೂನಿನ ಪ್ರಕಾರ ಯಾವುದೆ ಆಯುಧಗಳನ್ನು ಸಾರ್ವಜನಿಕವಾಗಿ ಬಳಸುವಂತಿಲ್ಲ ಹಾಗೂ ಪ್ರದರ್ಶಿಸುವಂತಿಲ್ಲ. ಐದು ಇಂಚಿಗೂ ಉದ್ದದ ಕತ್ತಿಯನ್ನು ಇಟ್ಟುಕೊಂಡರೆ ಲೈಸೆನ್ಸ್ ಪಡೆಯಬೇಕು. ಪರವಾನಗಿ ಪಡೆಯದೇ ಆಯುಧ ಇಟ್ಟುಕೊಂಡರೆ ಅಥವಾ ಬಳಸಿದರೆ ಆರ್ಮ್ಸ್ ಆ್ಯಕ್ಟ್ ಪ್ರಕಾರ ಅಪರಾಧ. ಆದರೆ ಹುಟ್ಟುಹಬ್ಬದ ಸಂಭ್ರಮದ ವೇಳೆ ವಿಜಯ್ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಎಡವಟ್ಟು ಮಾಡಿಕೊಂಡಿದ್ದು, ಜಾಲತಾಣಗಲ್ಲಿ ವಿಡಿಯೋ ಭಾರಿ ವೈರಲ್ ಆಗಿದೆ.
ದುನಿಯಾ ವಿಜಯ್ ಕೇಕ್ ಕಟ್ ಮಾಡಿರುವ ವಿಡಿಯೋವನ್ನು ಪರಿಶೀಲಿಸಿರುವ ಗಿರಿನಗರ ಪೊಲೀಸರು ದುನಿಯಾ ವಿಜಿ ವಿರುದ್ಧ ಕೇಸ್ ದಾಖಲಿಸಲು ಮುಂದಾಗಿದ್ದಾರೆ.