Breaking News

ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ – ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ ಸ್ಫೋಟ

Spread the love

ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ವೇಳೆ ಗದ್ದಲ ಗಲಾಟೆ ಜೋರಾಗಿದೆ. ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್‌ ಅವರನ್ನು ವೇದಿಕೆಯಿಂದ ಆಚೆ ಕಳುಹಿಸುವಂತೆ ಕುಮಾರಸ್ವಾಮಿ, ಸಂಸದ ಡಾ.ಕೆ ಸುಧಾಕರ್ ಬೆಂಬಲಿಗರು ಗಲಾಟೆ ಮಾಡಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಚಿಕ್ಕಬಳ್ಳಾಪುರ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಆಕ್ರೋಶಿತರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ರು. ಇಷ್ಟಾದ್ರೂ ಗಲಾಟೆ ಮುಂದುವರೆದಿದೆ. ಕಾರ್ಯಕ್ರಮದಿಂದ ತಮ್ಮ ಬೆಂಬಲಿಗರೊಂದಿಗೆ ಹೊರ ನಡೆದ ಪ್ರದೀಪ್ ಈಶ್ವರ್ ವಿರೋಧಿಗಳಿಗೆ ತೊಡೆ ತಟ್ಟಿ ಪಂಥಾಹ್ವಾನ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಕನ್ನಡ ಭವನದ ಮುಂದೆ ಹೈಡ್ರಾಮವೇ ಸೃಷ್ಟಿಯಾಗಿದೆ. ಒಕ್ಕಲಿಗ ಯುವಕರು, ಪ್ರದೀಪ್ ಈಶ್ವರ್ ಬೆಂಬಲಿಗರ ನಡುವೆ ಗಲಾಟೆ ತಾರಕಕ್ಕೆರಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ

Spread the love ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ