Home / new delhi / ರಾಜ್ಯದ ಹಲವೆಡೆ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ರಾಜ್ಯದ ಹಲವೆಡೆ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

Spread the love

ದಾವಣಗೆರೆ: ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ವಿವಿಧ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ದಾವಣಗೆರೆ ನಗರದ ಜಿಲ್ಲಾ ಪಂಚಾಯತ್​ ಎದುರಿನ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ರೈತ ಸಂಘ ಹುಚ್ಚವ್ವನಹಳ್ಳಿ ಬಣ ಮುಂಜಾನೆ 5 ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪೊಲೀಸರ ಎಚ್ಚರಿಕೆಯ ನಡುವೆಯೇ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ: ನಗರದ ಚೆನ್ನಮ್ಮ ಸರ್ಕಲ್​​ದಿಂದ ಡಿಸಿ ಕಚೇರಿವರೆಗೆ ಬೆಳಿಗ್ಗೆ 11 ಗಂಟೆಗೆ ಸಾಂಕೇತಿಕವಾಗಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಾಜ್ಯ ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿವೆ.

ಕಲಬುರಗಿ: ಜಿಲ್ಲೆಯ ರೈತರು ನಗರದ ಜಗತ್ ವೃತ್ತದಲ್ಲಿ ಮಧ್ಯಾಹ್ನ 12 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಿದ್ದಾರೆ.

ಹುಬ್ಬಳ್ಳಿ: ಜಿಲ್ಲೆಯ ರೈತರು ಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಬೆಳಿಗ್ಗೆ 10.30ಕ್ಕೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮಾಜಿ ಶಾಸಕ ಎನ್.ಎಚ್ ಕೋನರಡ್ಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಗಬ್ಬೂರು ಬೈಪಾಸ್‌ನಲ್ಲಿ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದ ಹಿನ್ನೆಲೆ ಬೆಳಗಾವಿ ತಾಲೂಕು ಹಾಗೂ ನಗರದಲ್ಲಿ ಯಾವುದೇ ರಸ್ತೆ ತಡೆಯಿಲ್ಲ. ಆದರೆ ರಾಮದುರ್ಗ, ಗೋಕಾಕ್, ಸವದತ್ತಿ ತಾಲೂಕಿನ ಹಲವು ಕಡೆ ರಸ್ತೆ ತಡೆಯಲು ನಿರ್ಧರಿಸಿರುವುದಾಗಿ ರೈತ ಸಂಘಟನೆಗಳ ಮುಖಂಡರು ನ್ಯೂಸ್​​ಫಸ್ಟ್​​ಗೆ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ

Spread the love ರಬಕವಿ-ಬನಹಟ್ಟಿ: ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ. ಗ್ರಾಮೀಣ ಭಾಗದ ಜನರು ಕುಸ್ತಿಗೆ ಬಹಳಷ್ಟು ಮಹತ್ವ ನೀಡುತ್ತಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ