Breaking News

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ – ಆರೋಪಿ ಪುಣ್ಯೇಶ್ ಬಂಧನ

Spread the love

ಬೆಂಗಳೂರು: ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ  ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು  ಪ್ರಮುಖ ಆರೋಪಿ ಪುಣ್ಯೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಾಥಮಿಕ ವಿಚಾರಣೆಯಲ್ಲಿ, ಆರೋಪಿ ಒಂದು ಬಾಕ್ಸ್‌ನಲ್ಲಿ ಮೊಟ್ಟೆಗಳನ್ನು ತಂದು ಘಟನೆ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯದ ಹಿಂದೆ ಇನ್ನೂ ಕೆಲವರು ಇದ್ದಾರೆಯೇ ಎಂಬ ಅನುಮಾನವೂ ಪೊಲೀಸರಿಗೆ ಮೂಡಿದ್ದು, ಆ ದಿಕ್ಕಿನಲ್ಲೂ ತನಿಖೆ ಮುಂದುವರಿದಿದೆ. ಪ್ರಮುಖ ಅರೋಪಿ ಸೇರಿ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೊಟ್ಟೆಗಳನ್ನು ಎಲ್ಲಿಂದ ತಂದಿದ್ದ, ಘಟನೆ ಪೂರ್ವನಿಯೋಜಿತವಾಗಿತ್ತೇ, ಮೊಟ್ಟೆ ಎಸೆಯಲು ಯಾರಾದರೂ ಸೂಚನೆ ನೀಡಿದ್ದರೇ ಹಾಗೂ ಪುಣ್ಯೇಶ್ ಜೊತೆಗೆ ಇದ್ದವರು ಯಾರು ಎಂಬ ಬಗ್ಗೆ ಪೊಲೀಸರು ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಏನಿದು ಪ್ರಕರಣ?
ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಿನ್ನೆ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು.

ಈ ವೇಳೆ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದ ಲೊಕೇಶನ್‌ ಕಳುಹಿಸಲಾಗಿತ್ತು. ಕ್ವೀನ್ಸ್‌ ರೋಡ್‌ ಬಳಿ ಕಾರಿನಿಂದ ಇಳಿದ ತಕ್ಷಣ ಅಲ್ಲಿದ್ದ ಕೆಲ ಕಾಂಗ್ರೆಸ್‌ ಕಾರ್ಯಕರ್ತರು ಅವರ ಮೇಲೆ ಮೊಟ್ಟೆ ಎಸೆದು, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಶಾಸಕರನ್ನು ಸುರಕ್ಷಿತವಾಗಿ ಸ್ಥಳದಿಂದ ಕರೆದೊಯ್ದಿದ್ದರು.


Spread the love

About Laxminews 24x7

Check Also

ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Spread the loveಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ  ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು  ಹೊರವಲಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ