Breaking News

ಕರ್ನಾಟಕದ ನಾಲ್ಕು ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

Spread the love

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.

ಜೂನ್‌ 18 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. ಜೂನ್ 8 ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕ, ಜೂನ್ 9 ನಾಮಪತ್ರ ಪರಿಶೀಲನೆ, ಜೂನ್ 11 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.

ಕರ್ನಾಟಕ ಸೇರಿ ಹತ್ತು ರಾಜ್ಯಗಳಲ್ಲಿ ಖಾಲಿಯಾಗಲಿರುವ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 24 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಮೂರು ಮತ್ತು ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ. ಕಾಂಗ್ರೆಸ್‌ಗೆ ಸಿಗುವ ಮೂರು ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಂದುವರಿಸುವ ಸಾಧ್ಯತೆ ಇದೆ. ಬಾಕಿ ಎರಡು ಸ್ಥಾನಗಳಿಗೆ ಪೈಪೋಟಿ ನಡೆಯಲಿದೆ. ಬಿಜೆಪಿಗೆ ಸಿಗುವ ಒಂದು ಸ್ಥಾನದ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಹೆಚ್‌.ಡಿ.ದೇವೇಗೌಡ ಅವರನ್ನು ಮುಂದುವರಿಸುವ ಬಗ್ಗೆ ಮಾತುಕತೆಗಳು ನಡೆದಿವೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ