ಕೊಪ್ಪಳ: ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದವರ ಮೇಲೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಶನಿವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ “ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರು ಮೈಸೂರು ದಸರಾ ಉದ್ಘಾಟನೆಯನ್ನು ತಿರಸ್ಕರಿಸಿದ್ದಾರೆ” ಎಂಬ ಆಧಾರರಹಿತ ಪೋಸ್ಟ್ ಪ್ರಕಟವಾಗಿ ವೈರಲ್ ಆಗಿತ್ತು.
ಈ ಪೋಸ್ಟ್ ಸಂಪೂರ್ಣ ಸುಳ್ಳು ಮತ್ತು ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ಕೂಡಿದೆ ಎಂಬುದನ್ನು ಗಮನಿಸಿದ ಕೊಪ್ಪಳ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುರೇಶ್ ಡಿ ಅವರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಮತ್ತು ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Laxmi News 24×7