Breaking News

ನನ್ನ ಬಗ್ಗೆ ಸುಳ್ಳು ಆರೋಪ – ಪ್ರಿಯಾಂಕಾ ಕ್ಷಮೆಗೆ ಜೋಶಿ ಆಗ್ರಹ

Spread the love

ನವದೆಹಲಿ: ನನ್ನ ಬಗ್ಗೆ ಸುಳ್ಳು ಆರೋಪ ಮಾಡಿದ ಪ್ರಿಯಾಂಕ್‌ ವಾದ್ರಾಲೋಕಸಭೆಯಲ್ಲಿ ಕ್ಷಮೆ ಕೇಳಬೇಕೆಂದು ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್‌ ಜೋಶಿ(ಆಗ್ರಹಿಸಿದ್ದಾರೆ.

ಅತ್ಯಾಚಾರಿಗಳ ಬಿಡುಗಡೆಯನ್ನು ಬೆಂಬಲಿಸಿದ್ದ ವ್ಯಕ್ತಿಯನ್ನು ನರೇಂದ್ರ ಮೋದಿ ಅವರು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿದ್ದಾರೆ. ಈ ಮೂಲಕ ದೇಶದ ಕೋಟ್ಯಂತರ ಹೆಣ್ಣುಮಕ್ಕಳಿಗೆ ಪ್ರಧಾನಿ ಏನು ಸಂದೇಶ ನೀಡುತ್ತಿದ್ದಾರೆ ಎಂದು ಪ್ರಿಯಾಂಕಾ ಲೋಕಸಭೆಯಲ್ಲಿ ಪ್ರಶ್ನಿಸಿದ್ದರು.

ಪ್ರಿಯಾಂಕಾ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಜೋಶಿ, ಪ್ರಿಯಾಂಕಾ ಅವರು ತಾವು ನೀಡಿದ ಹೇಳಿಕೆಗಳನ್ನು ದೃಢೀಕರಿಸಬೇಕು. ಯಾರಾದರೂ ಏನಾದರೂ ಹೇಳಿ ತಪ್ಪಿಸಿಕೊಳ್ಳಬಹುದೇ? ನಾನು ಈ ಆರೋಪಗಳನ್ನು ನಿರಾಕರಿಸುತ್ತೇನೆ. ಅವರನ್ನು ಸದನದಿಂದ ಹೊರಹಾಕಬೇಕು ಮತ್ತು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪ್ರಿಯಾಂಕಾ ಹೇಳಿದ್ದೇನು?
ಅತ್ಯಾಚಾರಿಗಳ ಬಿಡುಗಡೆಯನ್ನು ಬೆಂಬಲಿಸಿದ್ದ ವ್ಯಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿದ್ದಾರೆ ಎಂದು ಹೇಳಿ ತರಾಟೆಗೆ ತೆಗೆದುಕೊಂಡಿದ್ದರು.

ಅತ್ಯಾಚಾರಿಗಳ ಬಿಡುಗಡೆಯನ್ನು ಬೆಂಬಲಿಸಿದ್ದ ವ್ಯಕ್ತಿಯನ್ನು ನರೇಂದ್ರ ಮೋದಿ ಅವರು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿದ್ದಾರೆ. ಈ ಮೂಲಕ ದೇಶದ ಕೋಟ್ಯಂತರ ಹೆಣ್ಣುಮಕ್ಕಳಿಗೆ ಪ್ರಧಾನಿ ಏನು ಸಂದೇಶ ನೀಡುತ್ತಿದ್ದಾರೆ ಎಂದು ಪ್ರಿಯಾಂಕಾ ಲೋಕಸಭೆಯಲ್ಲಿ ಪ್ರಶ್ನಿಸಿದ್ದರು.

ಬಿಜೆಪಿ ಆಕ್ಷೇಪ:
ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಗೆ ಆಡಳಿತಾರೂಢ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅವರ ಹೇಳಿಕೆಗಳನ್ನು ಸಂಸತ್ತಿನ ಕಡತಕ್ಕೆ ಸೇರಿಸಬಾರದು ಎಂದು ಆಗ್ರಹಿಸಿದರು.

ಕೇಂದ್ರ ಸಚಿವ ಕಿರಣ್ ರಿಜಿಜು ಮಾತನಾಡಿ, ಈ ರೀತಿಯ ಹೇಳಿಕೆಗಳು ವ್ಯಕ್ತಿತ್ವ ಹರಣಕ್ಕೆ ಸಮಾನವಾಗಿದ್ದು, ಸಂಸತ್ತಿನಲ್ಲಿ ಇಂತಹ ಭಾಷೆಯನ್ನು ಬಳಸಬಾರದು. ಪ್ರಿಯಾಂಕಾ ಗಾಂಧಿ ಅವರಿಂದ ಇಂತಹ ಭಾಷೆಯನ್ನು ನಾವು ನಿರೀಕ್ಷಿಸಿರಲಿಲ್ಲ. ಹೀಗಾಗಿ ಅವರ ಈ ಆಕ್ಷೇಪಾರ್ಹ ಹೇಳಿಕೆಗಳನ್ನು ಲೋಕಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ರಿಜಿಜು ಸ್ಪೀಕರ್ ಅವರಲ್ಲಿ ಮನವಿ ಮಾಡಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ