Breaking News

ಕೌಟುಂಬಿಕ ಕಲಹ – ವಿಷ ಸೇವಿಸಿ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ಆತ್ಮಹತ್ಯೆ

Spread the love

ಬಳ್ಳಾರಿ: ಕೌಟುಂಬಿಕ ಕಲಹ  ಹಿನ್ನೆಲೆ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ Officer) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ  ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಲ್ಲಾಹುಣ್ಣಿ ಗ್ರಾಮದಲ್ಲಿ ನಡೆದಿದೆ.

ಶೀಲಾ (28) ಆತ್ಮಹತ್ಯೆ ಮಾಡಿಕೊಂಡಿರುವ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ. ಬಲ್ಲಾಹುಣ್ಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯಾಗಿದ್ದ ಶೀಲಾ, ಕೌಟುಂಬಿಕ ಕಲಹ ಹಿನ್ನೆಲೆ ವಿಷ ಸೇವಿಸಿದ್ದರು. ವಿಷ ಸೇವಿಸಿದ್ದ ಶೀಲಾ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆಗೆ ಸ್ಪಂದಿಸದೇ ಇಂದು ನಿಧನರಾಗಿದ್ದಾರೆ. ಘಟನೆ ಸಂಬಂಧ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಟ್ರೆಕ್ಕಿಂಗ್‌ಗೆ ಬಂದು ದಾರಿ ತಪ್ಪಿದ ಒಡಿಶಾ ಮೂಲದ ಯೂಟ್ಯೂಬರ್ – ರೋಪ್ ಸಹಾಯದಿಂದ ರಕ್ಷಣೆ

Spread the loveರಾಮನಗರ: ವಾರಾಂತ್ಯದ ಹಿನ್ನೆಲೆ ಟ್ರೆಕ್ಕಿಂಗ್‌ಗೆ  ಬಂದು ದಾರಿ ತಪ್ಪಿದ್ದ ಒಡಿಶಾ ಮೂಲದ ಯೂಟ್ಯೂಬರ್‌ರನ್ನು  ರೋಪ್ ಸಹಾಯದಿಂದ ಅಗ್ನಿಶಾಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ