Breaking News

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು – ಇನ್ನೋರ್ವ ಗಂಭೀರ

Spread the love

ರಾಯಚೂರು: ಜಿಲ್ಲೆಯ ಸಿಂಧನೂರು  ತಾಲೂಕಿನ ಸುಲ್ತಾನಪುರ ಹತ್ತಿರದ ತೆಗ್ಗಿನ ಕ್ಯಾಂಪ್‌ನಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತಪಟ್ಟ ರೈತನನ್ನು ದ್ಯಾವಪ್ಪ (35) ಎಂದು ಗುರುತಿಸಲಾಗಿದೆ.

ರಾಮಕೃಷ್ಣ ಎಂಬುವವರ ಜಮೀನಿನಲ್ಲಿ ಜೋಳ ಬಿತ್ತನೆ ಕೆಲಸಕ್ಕಾಗಿ ಮೂವರು ರೈತರು ಹೋಗಿದ್ದರು. ಈ ವೇಳೆ ಮಳೆ ಬಂದಿದ್ದು, ಮೂವರು ಮರದ ಕೆಳಗೆ ನಿಂತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದಿದ್ದು, ಪರಿಣಾಮ ರೈತ ದ್ಯಾವಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಯ್ಯಪ್ಪ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.

ಇನ್ನೋರ್ವ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳು ಅಯ್ಯಪ್ಪ ಅವರನ್ನು ಚಿಕಿತ್ಸೆಗಾಗಿ ಸಿಂಧನೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬಳಗಾನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.


Spread the love

About Laxminews 24x7

Check Also

ಸಾರಿಗೆ ಬಸ್, ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಸಾವು, 6 ಮಂದಿಗೆ ಗಂಭೀರ ಗಾಯ

Spread the loveಹಾವೇರಿ: ಸಾರಿಗೆ ಬಸ್ ಮತ್ತು ಲಾರಿ  ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ