Breaking News

ಪೆಟ್ರೋಲ್ ಬಂಕ್‌ಗೆ ರೈತರ ಮುತ್ತಿಗೆ – ಹೆದ್ದಾರಿ ತಡೆದು ಪ್ರತಿಭಟನೆ

Spread the love

ಚಿಕ್ಕಬಳ್ಳಾಪುರ: ಪ್ಲಾಸ್ಟಿಕ್ ಕ್ಯಾನ್‌ಗಳಿಗೆ  ಪೆಟ್ರೋಲ್  ಹಾಗೂ ಡೀಸೆಲ್ ನೀಡದ ಹಿನ್ನೆಲೆಯಲ್ಲಿ ರೈತರು  ಪೆಟ್ರೋಲ್ ಬಂಕ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ನಗರದ ಜಿಲ್ಲಾಡಳಿತ ಭವನದ ಸಮೀಪದ ಭಾರತ್ ಪೆಟ್ರೋಲಿಯಂ ಬಂಕ್ ಎದುರು ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ಇಂಧನ ನೀಡದಿದ್ದರೆ ಬೇರೆ ಯಾರಿಗೂ ನೀಡಬಾರದು ಎಂದು ಆಗ್ರಹಿಸಿದರು. ಟ್ರ್ಯಾಕ್ಟರ್ ಹಾಗೂ ಪವರ್ ಟಿಲ್ಲರ್‌ಗಳೊಂದಿಗೆ ಬಂಕ್‌ಗೆ ಬಂದ ರೈತರು ಬಂಕ್ ಮಾಲೀಕ ಸಂದೀಪ್ ಜೊತೆ ವಾಗ್ವಾದ ನಡೆಸಿದರು.

ಆಕ್ರೋಶಗೊಂಡ ರೈತರು ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ಹೆದ್ದಾರಿಯನ್ನು ತಡೆದರು. ರಸ್ತೆಯ ಮಧ್ಯೆ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್‌ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ರೈತರ ಮನವೊಲಿಸಲು ಯತ್ನಿಸಿದರು.

ಹೆದ್ದಾರಿ ಬಂದ್ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತರು ಮತ್ತು ಸಾರ್ವಜನಿಕರ ನಡುವೆ ವಾಗ್ವಾದವೂ ನಡೆಯಿತು. ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ವಾಹನಗಳನ್ನು ತೆರವುಗೊಳಿಸುವಂತೆ ಪೊಲೀಸರು ಸೂಚನೆ ನೀಡಿದ ವೇಳೆ ಪಿಎಸ್‌ಐ ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ