Breaking News

ತಂದೆ-ಮಕ್ಕಳು ಬಿಜೆಪಿ ಅಭ್ಯರ್ಥಿಯನ್ನ ಸೋಲಿಸ್ತಾರೆ

Spread the love

ವಿಜಯಪುರ: ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಸಿದ್ದೇಶ್ವರ ಆಪ್ತಗೆ ನೀಡಿದ್ದಾರೆ. ಆದರೆ, ಇದು ಪಕ್ಕಾ ಅಲ್ಲ, ಕೊನೆ ಕ್ಷಣದಲ್ಲಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಪಡಬೇಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಮುಗಿಯುವ ವರೆಗೂ ಇದನ್ನ ನಂಬುವ ಹಾಗಿಲ್ಲ.

ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಟ್ಟರೆ ಇದು ಬದಲಾಗುತ್ತೆ ಎಂದು ಯತ್ನಾಳ್‌ ತಿಳಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಸಿಗುತ್ತೆ.

ಶಾಮನೂರು ಅವರ ಉಪಕಾರ ಪೂಜ್ಯ ತಂದೆ ಯಡ್ಡಿಯೂರಪ್ಪ, ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಮೇಲೆ ತುಂಬಾ ಇದೆ. ರಾಘವೇಂದ್ರ ಹಾಗೂ ವಿಜಯೇಂದ್ರ ಗೆಲ್ಲಲು ಶಾಮನೂರು ಅವರ ಸಹಾಯ ಇದೆ. ಟಿಕೆಟ್ ಈಗ ಕೊಟ್ಟಿರೋದು ತಾತ್ಕಾಲಿಕ ಎಂದು ಯತ್ನಾಳ್‌ ಹೇಳಿದ್ದಾರೆ.

ಸಿದ್ದೇಶ್ವರ ಆಪ್ತಗೆ ಟಿಕೆಟ್ ಕೊಟ್ಟರೂ ಪೂಜ್ಯ ತಂದೆ ಹಾಗೂ ಮಕ್ಕಳು ಬಿಜೆಪಿ ಅಭ್ಯರ್ಥಿಯನ್ನ ಸೋಲಿಸುತ್ತಾರೆ. ಶಾಮನೂರು ಅವರ ಉಪಕಾರ ತೀರಿಸಲು ಕೊನೆ ಕ್ಷಣದಲ್ಲಿ ಏನು ಬೇಕಾದ್ರೂ ಮಾಡ್ತಾರೆ. ಬಾಗಲಕೋಟೆ ಅಭ್ಯರ್ಥಿ ಚರಂತಿಮಠ ಅವರು ಸೂಕ್ತ ಅಭ್ಯರ್ಥಿ ಇದ್ದಾರೆ ಎಂದು ಯತ್ನಾಳ್‌ ತಿಳಿಸಿದ್ದಾರೆ.

ಹಿಂದೆ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಮತ ಹಾಕುವಂತೆ ಶಾಮನೂರು ಶಿವಶಂಕರಪ್ಪ ಹೇಳಿದ್ದರೆ, ದಾವಣಗೆರೆಯಲ್ಲಿ ಯಡಿಯೂರಪ್ಪ ಶಾಮನೂರಿಗೆ ಮತ ಹಾಕಿ ಎಂದು ಹೇಳಿದ್ದರು. ಒಂದೊಮ್ಮೆ ದಾವಣಗೆರೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ, ಹಾಲಿ ಬಿಜೆಪಿ ಅಭ್ಯರ್ಥಿಯಿಂದ ಟಿಕೆಟ್​​ ಹಿಂಪಡೆದು ಶಾಮನೂರು ಮಲ್ಲಿಕಾರ್ಜುನ್ ಅವರ ಪುತ್ರನಿಗೆ ನೀಡಿದರೂ ಆಶ್ಚರ್ಯವಿಲ್ಲ ಎಂದು ಯತ್ನಾಳ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ