Breaking News

ಪಹಣಿ ತಿದ್ದುಪಡಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ – ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ

Spread the love

ಚಿತ್ರದುರ್ಗ: ಪಹಣಿ ತಿದ್ದುಪಡಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಎಫ್‌ಡಿಎ  ಓರ್ವ ಲೋಕಾಯುಕ್ತ  ಅಧಿಕಾರಿಗಳ ಬಲೆಗೆ ಸಿಲುಕಿರುವ ಘಟನೆ ಚಿತ್ರದುರ್ಗದ  ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದ ಹನುಮಂತಪ್ಪ ಎಂಬವರ ಬಳಿ ಎಫ್‌ಡಿಎ ಬಸವರಾಜ್, ಪಹಣಿ ತಿದ್ದುಪಡಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಬಸವರಾಜ್‌ನನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಖೆಡ್ಡಾಗೆ ಬೀಳಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಕೌಲಾಪುರೆ ಹಾಗೂ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸದ್ಯ ಎಫ್‌ಡಿಎ ಬಸವರಾಜ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ದಾಖಲೆಗಳ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ನಾಲೆಯಲ್ಲಿ ನವವಿವಾಹಿತೆ ಕಣ್ಮರೆ – ಪತಿ ವಿರುದ್ಧ ಕೊಲೆ ಆರೋಪ

Spread the loveಹಾಸನ: ನಾಲೆಯಲ್ಲಿ ನವವಿವಾಹಿತೆ ಕಣ್ಮರೆಯಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿನಡೆದಿದೆ. ಜಯಶೀಲಾ.ಬಿ.ಕೆ (ಪ್ರಿಯಾಂಕ 24) ಅನುಮಾನಾಸ್ಪದವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ