Breaking News

ಕಳೆದ ವರ್ಷ ಭೂಕುಸಿತವಾದ ಜಾಗದಲ್ಲೇ ಮತ್ತೆ ಅಪಾಯದ ಭೀತಿ

Spread the love

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಭೂಕುಸಿತದ  ಆತಂಕ ಮತ್ತೆ ಹೆಚ್ಚಾಗಿದೆ.

ಕಳೆದ ವರ್ಷ ಭೂಕುಸಿತ ಸಂಭವಿಸಿದ್ದ ಸ್ಥಳದಲ್ಲೇ ಇದೀಗ ಮತ್ತೆ ಭೂಮಿ ಕುಸಿದಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಮಡಿಕೇರಿ ಸಮೀಪದ ಮಂಗಳದೇವಿ ನಗರದ ಖಾಸಗಿ ಜಾಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಗಮನಾರ್ಹ ಸಂಗತಿಯೆಂದರೆ, ಇದೇ ಸ್ಥಳದಲ್ಲಿ ಕಳೆದ ವರ್ಷವೂ ಭೂಕುಸಿತ ಉಂಟಾಗಿತ್ತು. ಇದೀಗ ನಿರಂತರ ಮಳೆಯಿಂದ ಮತ್ತೊಮ್ಮೆ ಭೂಮಿ ಕುಸಿದಿರುವುದು ಸ್ಥಳೀಯರನ್ನು ಆತಂಕಕ್ಕೆ ದೂಡಿದೆ.

ಮಳೆ ಇದೇ ರೀತಿಯಲ್ಲಿ ಮುಂದುವರಿದರೆ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಬೆಟ್ಟ ಪ್ರದೇಶಗಳಲ್ಲಿ ನೆಲ ಸಡಿಲಗೊಂಡಿರುವುದರಿಂದ ಸುತ್ತಮುತ್ತಲಿನ ನಿವಾಸಿಗಳು ಭಯಭೀತರಾಗಿದ್ದಾರೆ. 2018ರಿಂದಲೂ ಈ ಭಾಗದಲ್ಲಿ ಭೂಕುಸಿತಗಳು ಸಂಭವಿಸುತ್ತಿದ್ದು, ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬರುತ್ತಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ