Breaking News

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Spread the love

ಧಾರವಾಡ: ಮರ್ಯಾದೆಗೆ ಅಂಜಿ ಮನನೊಂದು ವಿದ್ಯಾರ್ಥಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಮೃತನನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೇಲೂರು ಗ್ರಾಮದ ಆದಿತ್ಯ ಮಗ್ಯಾಗೇರಿ ಎಂದು ಗುರುತಿಸಲಾಗಿದ್ದು, ಧಾರವಾಡದ ಕಿಟಲ್ ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದ ಎಂದು ತಿಳಿದುಬಂದಿದೆ.

ಕಳೆದ ಶನಿವಾರದಂದು ಗಾಂಜಾ ಸೇವನೆ ಸಂಶಯದಲ್ಲಿ ಆದಿತ್ಯ ಹಾಗೂ ಇತರೆ 40ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದರೆ, ಪೊಲೀಸರು 10 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದು, 2 ಸಾವಿರ ರೂ. ಪಡೆದಿದ್ದರು. ಇದರಿಂದ ಮನನೊಂದು, ಮರ್ಯಾದೆಗೆ ಅಂಜಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಗನ ಸಾವಿಗೆ ಪೊಲೀಸರೇ ಕಾರಣ ಎಂದು ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಸಿಟಿವ್ ಬಂದವರ ಹತ್ತಿರ 25,000 ದಿಂದ 30,000 ರೂ. ಫೋನ್ ಪೇ ಮುಖಾಂತರ ಮೂರನೇಯ ವ್ಯಕ್ತಿಯಿಂದ ಹಣ ಪಡೆದಿದ್ದಾರೆಂದು ಅಂತಲೂ ಆರೋಪ ಕೇಳಿಬಂದಿದೆ. ಸದ್ಯ ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ