Breaking News

KSRTC ಡಿಪೋದಲ್ಲಿ ಮಹಿಳಾ ಮೆಕ್ಯಾನಿಕ್‌ಗೆ ಸಹೋದ್ಯೋಗಿಯಿಂದ ಚಾಕು ಇರಿತ

Spread the love

ಬೆಂಗಳೂರು: ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ KSRTC ಮಹಿಳಾ ಮೆಕ್ಯಾನಿಕ್ ಒಬ್ಬರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲ ನಗರದ ಅರಿಶಿನಕುಂಟೆ ಬಳಿಯಿರುವ KSRTC ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿರುವ 40 ವರ್ಷದ ಲಕ್ಷ್ಮಿ ಎಂಬುವವರ ಮೇಲೆ ಹಲ್ಲೆಯಾಗಿದೆ. ನಿನ್ನೆ ರಾತ್ರಿ ಸುಮಾರು 8:30ರ ವೇಳೆಗೆ ಲಕ್ಷ್ಮಿ ಅವರು ತಮ್ಮ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ಅಲ್ಲಿಗೆ ಬಂದ ಅಮಾನತುಗೊಂಡಿರುವ ಸಹೋದ್ಯೋಗಿ ಶಿವರಾಜ್ ಎಂಬಾತ, ಏಕಾಏಕಿ ಲಕ್ಷ್ಮಿ ಅವರ ಮೇಲೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಅವರು ಆರೋಪಿ ಶಿವರಾಜ್ ವಿರುದ್ಧ ಸಾಕ್ಷಿ ಹೇಳಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಶಿವರಾಜ್ ಈ ರೀತಿ ಮಾಡಿದ್ದಾನೆ. ಆರೋಪಿ ಶಿವರಾಜ್ ಕಳೆದ ಕೆಲವು ತಿಂಗಳುಗಳಿಂದ ಕರ್ತವ್ಯದಿಂದ ಅಮಾನತುಗೊಂಡಿದ್ದ ಎಂಬ ಮಾಹಿತಿಯೂ ಲಭ್ಯವಾಗಿದೆ

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಲಕ್ಷ್ಮಿ ಅವರನ್ನು ತಕ್ಷಣವೇ ಸ್ಥಳೀಯರು ಹಾಗೂ ಡಿಪೋ ಸಿಬ್ಬಂದಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಶಿವರಾಜ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಬಸ್ಸಿನ ಮುಂಭಾಗದ ಚಕ್ರದ ನಟ್ ಕಿತ್ತಿ ಹೊಲಕ್ಕೆ ನುಗ್ಗಿದ ಬಸ್ – ತಪ್ಪಿದ ದುರಂತ

Spread the love ಕೊಪ್ಪಳ: ಕನಕಗಿರಿ  ಮಾರ್ಗವಾಗಿ ಕೊಪ್ಪಳಕ್ಕೆ  ತೆರಳುತ್ತಿದ್ದ ಬಸ್ ಮುಂಭಾಗದ ಚಕ್ರದ ಕಮಾನ್ ಸ್ಪ್ರಿಂಗ್ ಪಟ್ಟಿಯ ನಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ