Breaking News

ಭ್ರೂಣಲಿಂಗ ಪತ್ತೆ,ಹತ್ಯೆ ಪ್ರಕರಣ…ಮೂವರು ವೈದ್ಯರು ಅಂದರ್…

Spread the love

ಮಂಡ್ಯ,ಏ29:ಭ್ರೂಣಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರು ಜೈಲು ಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಬಂಧಿತರ ವಿರುದ್ಧ ಒಟ್ಟು 12 ಮೊಕದ್ದಮೆ ದಾಖಲಾಗಿದೆ.
ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ
ಓರ್ವ ಮಹಿಳಾ ವೈದ್ಯೆ ಸೇರಿದಂತೆ ಮೂವರು ವೈದ್ಯರು ಪೊಲೀಸರ ಅತಿಥಿಯಾಗಿದ್ದಾರೆ.
ನಾಪತ್ತೆಯಾಗಿರುವ ಮತ್ತೋರ್ವ ಮಹಿಳಾ ವೈದ್ಯಗಾಗಿ ಜಾಲ ಬೀಸಿದ್ದಾರೆ. ಡಾ.ಪ್ರಿಯಾಂಕಾಗಾಗಿ ನಾಪತ್ತೆಯಾದ ವೈದ್ಯೆ.
ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ.ದಿವ್ಯಚೇತನಾ, ನಾವಿ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ.ವೈ.ಆರ್.ಹರ್ಷಿತ್, ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ.ಹರೀಶ್ ಬಂಧಿತರು.
ಸರ್ಕಾರಿ ಆಸ್ಪತ್ರೆಗಳ ಸ್ಕ್ಯಾನಿಂಗ್ ಯಂತ್ರಗಳನ್ನ ಅಕ್ರಮವಾಗಿ ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳಲ್ಲಿ ಬಳಕೆ ಆರೋಪ.
ಸಾರ್ವಜನಿಕರಿಂದ ಬಂದ ದೂರು ಆಧರಿಸಿ ತನಿಖೆಗೆ ಆದೇಶಿಸಿದ್ದ ಉಪ ಲೋಕಾಯುಕ್ತ ಬಿ.ವೀರಪ್ಪ.ಈ ಹಿನ್ನೆಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು.ಈ ವೇಳೆ ಕೆ.ಆರ್.ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಕೃತ್ಯ ಬಟಾಬಯಲಾಗಿದೆ.
ಈ ಸಂಬಂಧ ದೂರು ದಾಖಲಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು.
ದೂರು ಆಧರಿಸಿ ಮೂವರು ವೈದ್ಯರ ಬಂಧನ, ಮತ್ತೋರ್ವ ವೈದ್ಯೆಗಾಗಿ ಶೋಧ ನಡೆಸುತ್ತಿದ್ದಾರೆ.
ಮಂಡ್ಯದ ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು.
ಕೆ.ಆರ್.ಪೇಟೆಯ ಕುಶಾಲ್‌ ಡಯಾಗ್ನೋಸ್ಟಿಕ್‌ ಸೆಂಟರ್‌ನಲ್ಲಿ 7 ಪ್ರಕರಣಗಳಲ್ಲಿ 18 ವರ್ಷಕ್ಕಿಂತ ಕೆಳಗಿನ ಹೆಣ್ಣು ಮಕ್ಕಳಿಗೆ ಸ್ಕ್ಯಾನಿಂಗ್ ಮಾಡಿರುವುದು.
64 ಪ್ರಕರಣಗಳಲ್ಲಿ 18 ವರ್ಷಕ್ಕಿಂತ ಹೆಚ್ಚು 20 ವರ್ಷಕ್ಕಿಂತ ಕಡಿಮೆ ಇರುವ ಹೆಂಗಸರಿಗೆ ವಯಸ್ಸಿನ ದೃಢೀಕರಣ ದಾಖಲೆಗಳನ್ನು ಪಡೆದುಕೊಳ್ಳದೆ ಸ್ಕ್ಯಾನಿಂಗ್ ಮಾಡಲಾಗಿತ್ತು.
ಕಡತಗಳಲ್ಲಿ ಮಹಿಳೆಯರ ವಯಸ್ಸಿನ ದೃಢೀಕರಣ ದಾಖಲೆ ಪಡೆದು ಪರಿಶೀಲಿಸದೆ ಸ್ಕ್ಯಾನಿಂಗ್ ಮಾಡಿರುವುದು ಕಂಡುಬಂದಿತ್ತು.
ಬಂಧಿತರ ವಿರುದ್ಧ ಕಲಂ 65(1), 64(2)(ಎಂ), 376(2)(ಎನ್) ಭಾರತೀಯ ನ್ಯಾಯ ಸಂಹಿತೆ-2023 ಮತ್ತು 6 ಮತ್ತು 21 ಫೋಕ್ಸೋ ಕಾಯ್ದೆ 2017ರಡಿ ಒಟ್ಟು 12 ಮೊಕದ್ದಮೆ ದಾಖಲಾಗಿದೆ.
ಏ.17ರಂದು ಏಕಕಾಲಕ್ಕೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು…


Spread the love

About Laxminews 24x7

Check Also

ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ಸಂಸದ ಬೊಮ್ಮಾಯಿ

Spread the loveಸವಣೂರು: ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಈ ವ್ಯವಸ್ಥೆ ಬದಲಾವಣೆಯಾಗಿ ರೈತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ