Breaking News

ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ: ಶಾಸಕ ಪ್ರಕಾಶ್ ಕೋಳಿವಾಡಗೆ 500 ರೂ. ದಂಡ

Spread the love

ಹಾವೇರಿ: ಟ್ರಾಫಿಕ್ ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ಟ್ರಾಫಿಕ್ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.

ಆಗಸ್ಟ್ 25ರಂದು ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್ ಚಲಾಯಿಸಿದ್ದರು. ಈ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದಕ್ಕೆ ಸಾರ್ವಜನಿಕರಿಂದಲೂ ಟೀಕೆ ವ್ಯಕ್ತವಾಗಿತ್ತು.

ಸಾಮಾನ್ಯ ಜನರು ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸಿದರೆ ದಂಡ ಹಾಕುತ್ತಾರೆ. ಆದರೆ, ಜನಪ್ರತಿನಿಧಿಗಳಿಗೆ ನಿಯಮ ಅನ್ವಯಿಸುವುದಿಲ್ಲವೇ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ರಾಣೇಬೆನ್ನೂರು ಟ್ರಾಫಿಕ್ ಪೊಲೀಸರು ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಬಳಿಕ 500 ರೂ. ದಂಡದ ನೋಟಿಸ್ ಶಾಸಕರ ಮನೆಗೆ ತಲುಪಿಸಲಾಗಿದೆ. 

ಪೊಲೀಸರ ನೋಟಿಸ್ ಆಧರಿಸಿ ಶಾಸಕ ಪ್ರಕಾಶ್ ಕೋಳಿವಾಡ ಅವರು ದಂಡ ಪಾವತಿಸಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ. ಎಸ್‌ಪಿ ಮೇಡಂ ಅವರು ನನಗೆ ನೋಟಿಸ್ ನೀಡಿದ್ದಾರೆ. ಅವರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಅದನ್ನು ನಾನು ಗೌರವಿಸುತ್ತೇನೆ ಎಂದು ಶಾಸಕ ಪ್ರಕಾಶ್ ಕೋಳಿವಾಡ ತಿಳಿಸಿದ್ದಾರೆ.

ಈ ಘಟನೆ ಮೂಲಕ ಜನಪ್ರತಿನಿಧಿಗಳೂ ಸೇರಿದಂತೆ ಎಲ್ಲರೂ ಟ್ರಾಫಿಕ್ ನಿಯಮಗಳನ್ನು ಪಾಲಿಸಬೇಕು ಎಂಬ ಸಂದೇಶ ಮತ್ತೊಮ್ಮೆ ಹೊರಬಂದಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ