ಬೆಂಗಳೂರು: ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಬೆಂಕಿ ತಗುಲಿದೆ.
ಅಗ್ನಿ ಅವಘಡದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
Laxmi News 24×7