Breaking News

ಬೆಳಗಾವಿ: ಶಾರ್ಟ್ ಸರ್ಕ್ಯೂಟ್, ಸಿಲೀಂಡರ್ ಸ್ಪೋಟ, ಅಗ್ನಿ ಅನಾಹುತ

Spread the love

ಬೆಳಗಾವಿ – ನಗರದ ಚವ್ಹಾಟ್ ಗಲ್ಲಿಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಒಂದೂವರೆ ಲಕ್ಷ ರೂ. ಗೂ ಹೆಚ್ಚಿನ ಮೊತ್ತದ ನಷ್ಟವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ.

ಚವ್ಹಾಟ್ ಗಲ್ಲಿಯ ಶಹಾಪುರಕರ್ ಎಂಬುವವರ ಮನೆಯಲ್ಲಿ ಮೊದಲು ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾದ ಬೆಂಕಿ ಗ್ಯಾಸ್ ಸಿಲೀಂಡರ್ ಗೆ ತಗುಲಿ ಸಿಲಿಂಡರ್ ಸಹ ಸ್ಪೋಟಗೊಂಡಿದೆ.

 

ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಪೊಲೀಸರು ದೌಡಾಯಿಸಿದ್ದು ಬೆಂಕಿ ನಂದಿಸುವ ಮತ್ತು ರಕ್ಷಣೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಬೆಂಕಿ ಸಂಪೂರ್ಣ ಆರಿದ ಬಳಿಕವೇ ನಷ್ಟದ ಪ್ರಮಾಣ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ