Breaking News
Home / ಜಿಲ್ಲೆ / ಉತ್ತರಕನ್ನಡ / ಜೂನ್ 1 ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇದ

ಜೂನ್ 1 ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇದ

Spread the love

ಕಾರವಾರ: ಜಿಲ್ಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜೂನ್ 01 ರಿಂದ ಜುಲೈ 31 ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳನ್ನು ಬಳಸಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಮೀನು ಹಿಡಿಯುವುದನ್ನು ಕೇಂದ್ರ  ಸರ್ಕಾರ ನಿಷೇಧಿಸಿದ್ದು, ಈ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನ ವಲನಕ್ಕಾಗಿ 10 ಅಶ್ವ ಶಕ್ತಿಯ ವರೆಗಿನ ಸಾಮಥ್ರ್ಯದ ಮೋಟಾರಿಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡ ದೋಣಿಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇರುತ್ತದೆ ಎಂದು ಜಿಲ್ಲಾ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಪಿ. ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಸರ್ಕಾರದ ಈ ಅಧಿಸೂಚನೆಯನ್ನು ಉಲ್ಲಂಘಿಸಿಸುವ ಮೀನುಗಾರಿಕೆ ದೋಣಿಗಳು ಮತ್ತು ಮೀನುಗಾರರು, ಕರ್ನಾಟಕದ ಕಡಲ ಮೀನುಗಾರಿಕೆ(ನಿಯಂತ್ರಣ)  ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆ ಆಗುವುದಲ್ಲದೇ, ಒಂದು ವಷರ್ಫದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡಿಸೇಲ್ ಪಡೆಯಲು ಮತ್ತು ಕೇಂದ್ರ ಅಬಕಾರಿ ತೆರಿಗೆ ಮರು ಪಾವತಿಯನ್ನು ಪಡೆಯಲು ಅನರ್ಹರಾಗುತ್ತಾರೆಂದು ಅವರು ತಿಳಿಸಿದ್ದಾರೆ. 
 


Spread the love

About Laxminews 24x7

Check Also

ಶ್ರೀ ಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಶಿರಸಿ ಮಾರುಕಟ್ಟೆ ಪೊಲೀಸರು

Spread the loveಶಿರಸಿ: ಅಕ್ರಮವಾಗಿ ಶ್ರೀ ಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಶಿರಸಿ ಮಾರುಕಟ್ಟೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ