Breaking News

ಮೀನುಗಾರಿಕೆಗೆ ವಿನಾಯಿತಿ- ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ

Spread the love

ಮಂಗಳೂರು: ಕೊರೊನಾ ಮಹಾಮಾರಿ ಹಿನ್ನೆಲೆ ಇನ್ನೂ 15 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸಲಾಗಿದ್ದು, ಆದರೆ ಕೆಲವು ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಈ ಪಟ್ಟಿಯಲ್ಲಿ ಮೀನುಗಾರಿಕೆ ಸಹ ಇದ್ದು, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಇಂದಿನಿಂದ ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೀನುಗಾರಿಕೆ ಆರಂಭವಾಗಲಿದೆ. ಜನಸಂದಣಿ ಇಲ್ಲದ ಪ್ರದೇಶದಲ್ಲಿ ಮೀನು ಇಳಿಸಲು ವ್ಯವಸ್ಥೆ ಮಾಡಲಾಗಿದೆ. ಮಾರುಕಟ್ಟೆಗೆ ಸಾಗಿಸದೆ ಮೀನುಗಾರ ಮಹಿಳೆಯರ ಮೂಲಕ ಮನೆ ಬಾಗಿಲಿಗೆ ಮೀನು ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗಿದೆ.

ಬಂದರು ಹಾಗೂ ಧಕ್ಕೆಗಳಲ್ಲಿ ಮೀನು ಇಳಿಸುವುದಕ್ಕೆ ನಿಷೇಧ ಹೇರಲಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸುಮಾರು 14 ಸಾವಿರ ನಾಡದೋಣಿ, ಸಾಂಪ್ರದಾಯಿಕ ದೋಣಿಗಳಿವೆ. ಸಾಮಾಜಿಕ ಅಂತರ ಕಾಯ್ದುಕೊಂಡು ಮೀನು ಮಾರಾಟ ಮಾಡುವಂತೆ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ