Breaking News

ಚಲಿಸುತ್ತಿದ್ದ ಕಾರಿನ ಟೈಯರ್‌ ಬ್ಲಾಸ್ಟ್‌ – ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಐವರು ದುರ್ಮರಣ

Spread the love

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ  ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ನಡೆದಿದೆ.

ಚಳ್ಳಕೆರೆ ಮೂಲದ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಸ್ಥಳದಲ್ಲೇ‌ ಮೃತಪಟ್ಟವರು.ಕಾರಿನಲ್ಲಿ ಬಳ್ಳಾರಿಯಿಂದ ಚಳ್ಳಕೆರೆಗೆ ಆಗಮಿಸ್ತಿದ್ದು, ಚಳ್ಳಕೆರೆ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಐವರು ಬಳ್ಳಾರಿಗೆ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಅತಿ ವೇಗದಿಂದಾಗಿ ಕಾರಿನ ಟೈಯರ್‌ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ‌ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಮೊಳಕಾಲ್ಮುರು ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಎಲ್ ನಿನೋ ಎಫೆಕ್ಟ್ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

Spread the loveಬೆಂಗಳೂರು: ಎಲ್‌ನಿನೋ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ