Breaking News

ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ – ಒಂದೇ ಕುಟುಂಬದ ಐವರು ದುರ್ಮರಣ

Spread the love

ಚಿತ್ರದುರ್ಗ: ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ  ಜಿಲ್ಲೆಯ ಮೊಳಕಾಲ್ಮೂರು  ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬುಲೆರೋ ವಾಹನ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಬಳ್ಳಾರಿ ಮೂಲದವರು. ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16), ಪೂಜಾ (4), ಪರುಶುರಾಮ (1.5) ಮೃತರು. ಗಾಯಾಳುಗಳನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ