Breaking News

ನರೇಂದ್ರ ಗಿರಿ ಅಸಹಜ ಸಾವು ಕೇಸ್; FIR ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ

Spread the love

ನವದೆಹಲಿ: ದೇಶದಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದ ಅಖಿಲ ಭಾರತೀಯ ಅಖಾಡ ಪರಿಷದ್ ಅಧ್ಯಕ್ಷ ನರೇಂದ್ರಗಿರಿ ಅಸಹಜ ಸಾವಿನ ತನಿಖೆಯನ್ನ ಇಂದಿನಿಂದ ಸಿಬಿಐ ಅಧಿಕೃತವಾಗಿ ವಹಿಸಿಕೊಂಡಿದೆ.

ತನಿಖೆ ಹಿನ್ನೆಲೆಯಲ್ಲಿ 6 ಅಧಿಕಾರಿಗಳ ನೇತೃತ್ವದ ತಂಡ ಪ್ರಯಾಗ್​ರಾಜ್​ ನಗರಕ್ಕೆ ಆಗಮಿಸಿದ್ದು, ಪ್ರಕರಣ ಸಂಬಂಧ ಎಫ್​ಐಆರ್ ದಾಖಲಿಸಿಕೊಂಡಿದೆ. ಕಳೆದ ಸೋಮವಾರ ಬಘಮಬರಿ ಗದ್ದಿ ಮಠದಲ್ಲಿರುವ ರೂಮಿನಲ್ಲಿ ನರೇಂದ್ರ ಗಿರಿಯ ಶವ ಪತ್ತೆಯಾಗಿತ್ತು. ನರೇಂದ್ರ ಗಿರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಡೆತ್​ನೋಟ್ ಕೂಡ ಸಿಕ್ಕಿದೆ.

ಇನ್ನು ಉತ್ತರ ಪ್ರದೇಶದ ಪೊಲೀಸರು ಈಗಾಗಲೇ ಅಸಹಜ ಸಾವು ಪ್ರಕರಣ ಸಂಬಂಧ ಓರ್ವ ಆರೋಪಿ ಆನಂದ್​ ಗಿರಿ ಎಂಬಾತನ್ನ ಬಂಧಿಸಿದ್ದಾರೆ. ಇನ್ನು ಈ ಪ್ರಕರಣವನ್ನ ಸಿಎಂ ಯೋಗಿ ಆದಿತ್ಯನಾಥ್ ಗಂಭೀರವಾಗಿ ಪರಿಗಣಿಸಿದ್ದು, ಸೆಪ್ಟೆಂಬರ್ 23 ರಂದು ಸಿಬಿಐ ತನಿಖೆಗೆ ನೀಡಿತ್ತು.

 


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ