ಬೆಂಗಳೂರು: ನಗರದಲ್ಲಿನ ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ, ತಿಂಡಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾ. 31ರೆವರೆಗೆ ಬಂದ್ ಮುಂದುವರೆಸಲಾಗುವುದು. ಕೊರೊನಾ ವೈರಸ್ ವಿರುದ್ದ ಹೋರಾಟ ನಡೆಸಲು ಸರ್ಕಾರ ಸನ್ನದ್ಧವಾಗಿದೆ. ವೈದ್ಯರೊಂದಿಗೆ ಸಭೆ ನಡೆಸಿದ್ದೇವೆ. ವೈದ್ಯರು ಸಲಹೆಗಳನ್ನು ನೀಡಿದ್ದು, ಅವುಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.
30 ಫೀಮರ್ ಕ್ಲಿನಿಕ್ ತೆರೆಯಲಾಗುವುದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವಿರ ಬೆಡ್ ವ್ಯವಸ್ಥೆ. ರಾಜ್ಯದಲ್ಲಿ 144 ಸೆಕ್ಷನ್ ಮುಂದುವರೆಸಲಾಗುವುದು ಎಂದು ಹೇಳಿದರು.
ರಾಜ್ಯಾದ್ಯಂತ ಲಾಕ್ ಡೌನ್ ಮಾಡಲು ಇಂದು ಸಂಜೆವರೆಗೂ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ವೈ ತಿಳಿಸಿದರು.