Breaking News

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಬಂಧನ

Spread the love

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌  ಅವರನ್ನು ಜಾರಿ ನಿರ್ದೇಶನಾಲಯ  ಅಧಿಕಾರಿಗಳು ಬಂಧಿಸಿದ್ದಾರೆ.

ಕೆಪಿಎಸ್‌ಸಿ ಹಗರಣ ಪ್ರಕರಣ ಸಂಬಂಧ 2ನೇ ಬಾರಿಗೆ ಶಿವಶಂಕರಪ್ಪ ಅವರ ಮನೆ ಮೇಲೆ ಇ.ಡಿ ದಾಳಿ ಮಾಡಿತ್ತು. ಅದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಕೆಪಿಎಸ್‌ಸಿ ಸದಸ್ಯೆ ಗೀತಾ ಅವರನ್ನು ವಶಕ್ಕೆ ಪಡೆಯಲಾಗಿದೆ. ಅಭ್ಯರ್ಥಿಗಳ ಜೊತೆ ನೇರ ಸಂಪರ್ಕ ಹೊಂದಿದ್ದ ಆರೋಪ ಇವರ ಮೇಲಿತ್ತು.

ತಪ್ಪೊಪ್ಪಿಗೆ ಮಾಡಿಕೊಂಡಿದ್ದ ಇಬ್ಬರು ಅಭ್ಯರ್ಥಿಗಳ ಮನೆಯ ಮೇಲೂ ಇ.ಡಿ ದಾಳಿ ನಡೆಸಿದೆ. ಮತ್ತೊಮ್ಮೆ ಹೇಳಿಕೆ ಪಡೆದು ಬಂಧಿಸುವ ಸಾಧ್ಯತೆ ಇದೆ.

ಶಿವಶಂಕರಪ್ಪ ಸಂಬಂಧಿ ಸುಗುರೇಶ್ ಜಾಕಾ ತಪ್ಪೊಪ್ಪಿಗೆ ಮತ್ತು ಗ್ಯಾನೇಂದ್ರ ಹೇಳಿಕೆ ಆಧರಿಸಿ ದಾಳಿ ನಡೆಸಲಾಗಿತ್ತು. ನೇಮಕಾತಿಯಲ್ಲಿ ಅಕ್ರಮ ಮಾಡಲು ಸುಗುರೇಶ್ ಜಾಕಾಗೆ ಶಿವಶಂಕರಪ್ಪ ಸೂಚಿಸಿದ್ದರು. ಹೀಗಾಗಿ, ಶಿವಶಂಕರಪ್ಪಗೆ ಅಕ್ರಮದ ಬಗ್ಗೆ ಮೊದಲೇ ಗೊತ್ತಿತ್ತು ಎಂದು ಇ.ಡಿ ವಾದವಾಗಿದೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ