Breaking News

ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಮಾಜಿ ಸಚಿವ ಭೈರತಿ ಬಸವರಾಜ ಭಾಗಿ

Spread the love

ಬೆಳಗಾವಿ: ಬೆಳಗಾವಿ ನಗರದ  ಧರ್ಮನಾಥ ಭವನದ ಹತ್ತಿರವಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ  ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಿಜೆಪಿ ಸಂಘಟನಾತ್ಮಕ ಸಭೆಯನ್ನು ಉದ್ದೇಶಿಸಿ  ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಭೈರತಿ ಬಸವರಾಜ ಭಾಗವಹಿಸಿ ಮುಂಬರುವ ಪಕ್ಷದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು ನಂತರ ಮಾತನಾಡಿದ ಅವರು ಪಕ್ಷ ನೀಡುವ ಪ್ರತಿಯೊಂದು ಕಾರ್ಯಕ್ರಮಗಳನ್ನು ಮುಖಂಡರು,ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಹೋಗಿ ಪಕ್ಷದ  ಕಾರ್ಯಕರ್ತರಿಗೆ ತಿಳಿಸಿ ಸಕ್ರೀಯವಾಗಿ ಪಕ್ಷದ ಕಾರ್ಯಕ್ರಮ ಹಾಗೂ ಪಕ್ಷ ಸಂಘಟನೆಯಲ್ಲಿ ಭಾಗವಹಿಸಿ 2028ರ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಾವುಟ ಹಾರಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ವಿಭಾಗ ಪ್ರಭಾರಿಗಳಾದ ಸಂಜಯ ಪಾಟೀಲ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಸುರೇಶ್ ಮಾರಿಹಾಳ, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ