Breaking News

ನಾಲ್ವರು ಕಳ್ಳರ ಬಂಧನ, 18 ಬೈಕ್ ಜಪ್ತಿ

Spread the love

ಬೆಳಗಾವಿ: ನಗರದ ಮಾರ್ಕೆಟ್, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವುನ ಪ್ರಕರಣದಲ್ಲಿ ಗುರುವಾರ ಪೊಲೀಸರು 6.50 ಲಕ್ಷ ರೂ. ಮೌಲ್ಯದ 18 ಬೈಕ್ ಜಪ್ತಿ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ.
ತಾಲೂಕಿನ ಕಂಗ್ರಾಳಿ ಕೆ.ಎಚ್.ಗ್ರಾಮದ ರಜತ ಶಿವಣಗೇಕರ (29), ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಗ್ರಾಮದ ವಿಠ್ಠಲ ಆರೇರ (38), ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಉಮೇಶ ಬಾಗೇವಾಡಿ (33), ಗುಡಸ ಗ್ರಾಮದ ಮೌಲಾ ಹಲಕರ್ಣಿ (48) ಬಂಧಿತರು.
ಎರಡು ವರ್ಷಗಳಿಂದ ನಗರದ ವಿವಿಧ ಭಾಗಗಳಲ್ಲಿ ಪಾರ್ಕಿಂಗ್ ಮಾಡಿದ್ದ ಬೈಕ್ ಕಳವು ಕುರಿತು ಪ್ರಕರಣ ದಾಖಲಾಗಿದ್ದವು. ಸಿಸಿಬಿ ಪಿಐ ನಂದೀಶ್ವರ ಕುಂಬಾರ, ಎಪಿಎಂಸಿ ಪಿಐ ಯು.ಎಸ್.ಅವಟಿ ನೇತೃತ್ವದಲ್ಲಿ ರಚಿಸಿದ್ದ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಪೊಲೀಸ್ ವಶಕ್ಕೆ: ನಗರದಲ್ಲಿ ಮಟ್ಕಾ, ಗಾಂಜಾ ಅಡ್ಡೆ ಮೇಲೆ ದಾಳಿ ಮುಂದುವರಿಸಿರುವ ಪೊಲೀಸರು ಗುರುವಾರ ನಗರದ ಲಕ್ಷ್ಮೀ ಗಲ್ಲಿಯ ಮಿಲಿಂದ ಸುತಾರ (43), ಭಾರತ ನಗರದ ಶುಭಂ ಕನ್ನೂಕಲೆ (31), ಅನಗೋಳದ ವಿರಾಜ ಕಂಗ್ರಾಳಕರ (29), ಬಾಂದೂರ ಗಲ್ಲಿಯ ಸುನೀಲ ಅಸಲಕರ (26) ಬಂಧಿಸಿ, 11 ಸಾವಿರ ರೂ. ನಗದು, ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಟಿಳಕವಾಡಿ, ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ