Breaking News

ಹರ್ಷ ಸಕ್ಕರೆ ಕಾರ್ಖಾನೆಯ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Spread the love

ಸವದತ್ತಿ: ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಹರ್ಷ ಶುಗರ್ಸ್, ಮೃಣಾಲ್ ಶುಗರ್ಸ್ ಹಾಗೂ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ, ಕೆಎಲ್ಇ ವಿಶ್ವವಿದ್ಯಾಲಯ ಮತ್ತು ಡಾ.ಪ್ರಭಾಕರ ಕೊರೆ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಮಿಕರು ಮತ್ತು ನೌಕರರ ಆರೋಗ್ಯದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಈ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಶಿಬಿರಕ್ಕೆ ಮೃಣಾಲ ಶುಗರ್ಸ್ ಚೇರಮನ್ ಮೃಣಾಲ ಹೆಬ್ಬಾಳಕರ್ ಚಾಲನೆ ನೀಡಿದರು. ಶಿಬಿರದಲ್ಲಿ ವೈದ್ಯಕೀಯ ತಜ್ಞರ ತಂಡ ಕಾರ್ಮಿಕರು ಮತ್ತು ಸಿಬ್ಬಂದಿಗೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿ, ಅಗತ್ಯ ಸಲಹೆ ಹಾಗೂ ಚಿಕಿತ್ಸೆಯ ಕುರಿತು ಮಾರ್ಗದರ್ಶನ ನೀಡಿದರು.
ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ ಪರೀಕ್ಷೆ, ಸಕ್ಕರೆ ಮಟ್ಟ ಪರೀಕ್ಷೆ ಸೇರಿದಂತೆ ವಿವಿಧ ಮೂಲಭೂತ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು. ಆರೋಗ್ಯ ತಪಾಸಣೆ ಮೂಲಕ ಕಾರ್ಮಿಕರಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆಯಲು ಸಹಾಯವಾಗುತ್ತದೆ ಎಂದು ವೈದ್ಯರು ತಿಳಿಸಿದರು.

ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ನೌಕರರು ಮತ್ತು ಕಾರ್ಮಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ಇಂತಹ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದರಿಂದ ಸಿಬ್ಬಂದಿಯಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಸಹ ನೆರವಾಗುತ್ತದೆ ಎಂದು ಮೃಣಾಲ ಹೆಬ್ಬಾಳಕರ್ ಹೇಳಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ