ಗೋಕಾಕ: ಉಚಿತ ಕಣ್ಣಿನ ಪೊರೆ ತಪಾಸಣೆ ಬೃಹತ್ ಶಿಬಿರವನ್ನು ಮಾರ್ಚ್ 16ರಂದು ಮುಂಜಾನೆ 9ರಿಂದ ಮಧ್ಯಾಹ್ನ 1:30ರ ವರೆಗೆ ತಾಲ್ಲೂಕಿನ ಮಮದಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಶಿಬಿರದಲ್ಲಿ ವಿಶೇಷವಾಗಿ ಮಕ್ಕಳ ತಪಾಸಣೆ, ರಕ್ತದೊತ್ತಡ, ಹೃದಯ, ಚರ್ಮರೋಗ ತಪಾಸಣೆ ಸಹ ಉಚಿತವಾಗಿ ಮಾಡಲಾಗುತ್ತಿದೆ.
ಡಾ.ಎಂ.ಎಸ್.ಕೊಪ್ಪದ, ಡಾ.ಅಶೋಕ ಮುರಗೋಡ, ಡಾ.ಸಿದ್ದಣ್ಣ ಕಮತ, ಕಣ್ಣಿನ ತಜ್ಞ ಡಾ. ಸಂದೀಪ್ ಕೋಲಕಾರ, ಡಾ. ಅಮರ ಮುರುಗೋಡ, ಡಾ.ಪ್ರಮಿತಾ ಮುರುಗೋಡ, ಡಾ.ಪ್ರೀತಿ ಚೌಧರಿ ಹಾಗೂ ನೇತ್ರಾಧಿಕಾರಿ ಉದಯ ಅಲಾಸೆ ಮೊದಲಾದವರು ತಪಾಸಣೆ ನಡೆಸುವರು.
ಮಮದಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ತಮ್ಮ ಆಧಾರ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್‌ಗಳೊಂದಿಗೆ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ಮೂಲಕ ಕೋರಲಾಗಿದೆ.
Laxmi News 24×7