Breaking News

ಕಾರಾಗೃಹ ಇಲಾಖೆಯ ಆಧುನೀಕರಣಕ್ಕೆ ಮತ್ತಷ್ಟು ವೇಗ

Spread the love

ಬೆಂಗಳೂರು: ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು (ಆ.21) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಕಾರಾಗೃಹಗಳ ಭದ್ರತೆ, ಮೇಲ್ವಿಚಾರಣೆ ಹಾಗೂ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ.

ಕಾರಾಗೃಹಗಳಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳು, ಪೋರ್ಟಬಲ್‌ ಸಿಗ್ನಲ್‌ ಜಾಮರ್‌ಗಳು ಹಾಗೂ ಕೈದಿಗಳ ದೂರವಾಣಿ ಕರೆ ವ್ಯವಸ್ಥೆ ಸೇರಿದಂತೆ ಹಲವು ಆಧುನಿಕ ಉಪಕರಣಗಳನ್ನು ಅಳವಡಿಸಲಾಗುವುದು. ಇದರಿಂದ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಭದ್ರತಾ ಮೇಲ್ವಿಚಾರಣೆಯನ್ನು ಪರಿಣಾಮಕಾರಿಗೊಳಿಸಲು ನೆರವಾಗಲಿದೆ.

ಬದಲಾಗುತ್ತಿರುವ ಸವಾಲುಗಳಿಗೆ ಅನುಗುಣವಾಗಿ ಕಾರಾಗೃಹ ಇಲಾಖೆಯಲ್ಲೂ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವುದು ಅಗತ್ಯ. ಸುರಕ್ಷತೆ ಮತ್ತು ಮೇಲ್ವಿಚಾರಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು ಸಂಪುಟ ಇದಕ್ಕೆ ಸಮ್ಮತಿ ಸೂಚಿಸಿದೆ.


Spread the love

About Laxminews 24x7

Check Also

ನಾಗೇಂದ್ರ ರಾಜೀನಾಮೆ ಬಗ್ಗೆ ನೋಟಿಸ್‌ ‌ಕೊಟ್ಟು ವಿಪಕ್ಷ ಚರ್ಚೆ ಮಾಡಲಿ: ಡಿಕೆಶಿ

Spread the loveಬೆಂಗಳೂರು: ವಿಧಾನ ಪರಿಷತ್ ಕಲಾಪ 5ನೇ ದಿನವೂ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕಲಾಪ ಬಲಿಯಾಯ್ತು. ವಿಪಕ್ಷಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ