Breaking News

GST ತೆರಿಗೆದಾರರಿಗೆ ಭರ್ಜರಿ ಸಿಹಿಸುದ್ದಿ

Spread the love

ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ರಿಟರ್ನ್ ಸಲ್ಲಿಕೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮಾಸಿಕ ಮತ್ತು ತ್ರೈಮಾಸಿಕ ಮಾರಾಟ ರಿಟರ್ನ್ ಮತ್ತು ತೆರಿಗೆ ಪಾವತಿ ಅರ್ಜಿ GSTR-3B ವಿಳಂಬ ಸಲ್ಲಿಕೆ ಶುಲ್ಕವನ್ನು ಗರಿಷ್ಠ 500 ರೂಪಾಯಿಗಳಿಗೆ ಮಿತಿಗೊಳಿಸಲಾಗಿದೆ.

2017ರ ಜುಲೈನಿಂದ 2020ರ ಜುಲೈ ವರೆಗಿನ ಅವಧಿಯ ರಿಟರ್ನ್ ಗಳಿಗೆ ಈ ನಿಯಮ ಅನ್ವಯವಾಗಲಿದ್ದು, ತೆರಿಗೆ ಬಾಕಿ ಉಳಿಸಿಕೊಂಡಿರದಿದ್ದರೆ ವಿಳಂಬ ಶುಲ್ಕ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ತೆರಿಗೆದಾರರಿಗೆ ಈ ಸುದ್ದಿ ನೆಮ್ಮದಿ ನೀಡಲಿದ್ದು, ಸೆಪ್ಟಂಬರ್ ಅಂತ್ಯದ ಒಳಗೆ ಸಲ್ಲಿಕೆಯಾಗುವ GSTR-3B ರಿಟರ್ನ್ ಗಳಿಗೆ ಇದು ಅನ್ವಯವಾಗಲಿದೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ