Breaking News

ಕರ್ನಾಟಕ ಸಹಕಾರ ಮಹಾ ಮಂಡಲದ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಆಯ್ಕೆ

Spread the love

ಬೆಂಗಳೂರು: ಕರ್ನಾಟಕ ಸಹಕಾರ ಮಹಾ ಮಂಡಲ  ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನೇತೃತ್ವದ ತಂಡ ಗೆಲುವು ಸಾಧಿಸಿದ್ದು, ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ  ಆಯ್ಕೆಯಾಗಿದ್ದಾರೆ.

ಜಿ.ಟಿ. ದೇವೇಗೌಡ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ವಿಚಾರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಕೂಡ ಒಪ್ಪಿಗೆ ನೀಡಿದ್ದಾರೆ. ಚುನಾವಣೆಗೂ ಮುನ್ನ ಮುಖ್ಯಮಂತ್ರಿ ನಿವಾಸದಲ್ಲಿ ಈ ಸಂಬಂಧ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಜಿ.ಟಿ. ದೇವೇಗೌಡ ಅವರ ಆಯ್ಕೆಗೆ ಸಿಎಂ ಡಿಕೆಶಿ ಸಹಮತ ವ್ಯಕ್ತಪಡಿಸಿದ್ದರು.

ಇದೀಗ ಸಹಕಾರ ಮಹಾ ಮಂಡಲದ ಅಧ್ಯಕ್ಷ ಸ್ಥಾನ ಜಿ.ಟಿ. ದೇವೇಗೌಡ ಅವರಿಗೆ ಒಲಿದಿರುವುದು ರಾಜ್ಯ ರಾಜಕೀಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಜೆಡಿಎಸ್‌ನಿಂದ ಇತ್ತೀಚಿನ ದಿನಗಳಲ್ಲಿ ಅಂತರ ಕಾಯ್ದುಕೊಂಡಿರುವ ಜಿ.ಟಿ. ದೇವೇಗೌಡ ಅವರು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆಯೇ ಎಂಬ ಪ್ರಶ್ನೆಯೂ ಮುನ್ನೆಲೆಗೆ ಬಂದಿದೆ.

ಇದೀಗ ಜಿಟಿ ದೇವೇಗೌಡರನ್ನು ಆಯ್ಕೆ ಮಾಡಿ ಡಿಕೆಶಿ ರಾಜಕೀಯ ಚೆಕ್‌ಮೆಟ್ ಕೊಟ್ಟಿದ್ದಾರೆ. ಅಧ್ಯಕ್ಷ ಸ್ಥಾನ ಮೂಲಕ ಕಾಂಗ್ರೆಸ್ ಕಡೆ ಜಿಟಿಡಿ ಮುಖ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ ಸೇರ್ಪಡೆ ಆಗ್ತಾರಾ ಎಂಬ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಜೋರಾಗಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ