Breaking News

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು

Spread the love

ಗದಗ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

Spread the love ಗದಗ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಗದಗ  ಜಿಲ್ಲೆಯ ರೋಣ  ತಾಲೂಕಿನ ಮೆಣಸಗಿ ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ