ಬೆಳಗಾವಿ: ಗಂಡನ ಮನೆಯವರು ಕಿರುಕುಳ ಕೊಟ್ಟು ಊಟ, ನೀರು ಕೊಡದೇ ಮಗಳನ್ನು ಕೊಂದು ಹಾಕಿದ್ದಾರೆಂದು ಮೃತ ಮಹಿಳೆ ಕುಟುಂಬಸ್ಥರು ಕಣ್ಣೀರು ಹಾಕಿರುವ ಘಟನೆ ಬೆಳಗಾವಿ ಬಿಮ್ಸ್ ಆಸ್ಪತ್ರೆ ಎದುರಿಗೆ ನಡೆದಿದೆ.
ಇಂದು ಬೆಳಗ್ಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಎದುರಿಗೆ ಎರಡು ಕುಟುಂಬಗಳ ನಡುವೆ ಬೆಳಗಾವಿ ಜಿಲ್ಲಾಸ್ಪತ್ರೆಯ ಓಪಿಡಿಯಲ್ಲೇ ಗಲಾಟೆ ನಡೆದಿದೆ. ಗಂಡನ ಮನೆಯವರ ಕಿರುಕುಳಕ್ಕೆ ನಸ್ತಹೀನ್ ದೇಸಾಯಿ (25) ಎಂಬ ಮಹಿಳೆ ಸಾವನ್ನಪ್ಪಿದ್ದು, ಮಹಾರಾಷ್ಟ್ರ ಚಂದಗಡ ಮೂಲದ ಗಂಡ ರೇಹಾನ್ ನೇಸರಿಕರ್( 27) ಎಂಬಾತನ ಮೇಲೆ ಕಿರುಕುಳ ಆರೋಪ ಮಾಡಲಾಗಿದೆ.
ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆ ಆಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಮಾನಸಿಕ ಹಿಂಸೆ,ಕಿರುಕುಳ ಕೊಟ್ಟಿದ್ದಾರೆ. ಊಟ ಕೊಡದೇ ನಿರಂತರ ಕಿರುಕುಳ ನೀಡಿ ಮಾನಸಿಕ ಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ.ಅನಾರೋಗ್ಯವಾದರೂ ಆಸ್ಪತ್ರೆಗೆ ತೋರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಮದುವೆ ಆದಾಗಿನಿಂದಲೂ ಕಿರುಕುಳ ಕೊಟ್ಟಿದ್ದಾರೆ. ನಮ್ಮ ಮಗಳಿಗೆ ಆಗಿರೋ ಅನ್ಯಾಯ ಮತ್ಯಾರಿಗೂ ಆಗಬಾರದೆಂದು ಮೃತ ಮಹಿಳೆ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7