Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಪಕ್ಕದ ಮಹಾರಾಷ್ಟ್ರದಲ್ಲಿ ರೋಗ ಹೆಚ್ಚಿರುವುದರಿಂದ ನಾವು ಎಷ್ಟೇ ಜಾಗ್ರತೆ ವಹಿಸಿದರೂ ಕಡಿಮೆ:ಗಣೇಶ ಹುಕ್ಕೇರಿ

ಪಕ್ಕದ ಮಹಾರಾಷ್ಟ್ರದಲ್ಲಿ ರೋಗ ಹೆಚ್ಚಿರುವುದರಿಂದ ನಾವು ಎಷ್ಟೇ ಜಾಗ್ರತೆ ವಹಿಸಿದರೂ ಕಡಿಮೆ:ಗಣೇಶ ಹುಕ್ಕೇರಿ

Spread the love

ಚಿಕ್ಕೋಡಿ – ಕೊರೋನಾ ವೈರಸ್ ಹರಡುವುದನ್ನು ತಡೆಯಲು ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಜನಪ್ರತಿನಿಧಿಗಳು ನಿರಂತರ ಪ್ರಯತ್ನ ಮುಂದುವರಿಸಿದ್ದಾರೆ. ಜನರಲ್ಲಿ ಅರಿವು ಮೂಡಿಸುವುದು, ಔಷಧಗಳನ್ನು ಸಿಂಬಡಿಸುವುದು, ಅಧಿಕಾರಿಗಳೊಂದಿಗೆ ಸಭೆ ನಡೆಸುವುದು, ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ತರಿಸುವುದು… ಇತ್ಯಾದಿ ಕೆಲಸಗಳನ್ನು ಜನಪ್ರತಿನಿಧಿಗಳು ಮಾಡುತ್ತಿದ್ದಾರೆ.

ಗಣೇಶ ಹುಕ್ಕೇರಿ

ಶಾಸಕ ಗಣೇಶ ಹುಕ್ಕೇರಿ ಕಳೆದ ವಾರ ಚಿಕ್ಕೋಡಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೊರೋನಾ ವೈರಸ್ ನಿಯಂತ್ರಿಸಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.

ಇದೀಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ, ಚಿಕ್ಕೋಡಿ, ಸದಲಗಾ ಪಟ್ಟಣದಲ್ಲಿ ಸಂಚರಿಸಿ ಕೊರೊನಾ ವೈರಾಣು ಹರಡದಂತೆ ಎಚ್ಚರ ವಹಿಸಲು ವಿನಂತಿಸುತ್ತಿದ್ದಾರೆ.

ಜನರು ಅಗತ್ಯ ವಸ್ತುಗಳ ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಗಣೇಶ ಹುಕ್ಕೇರಿ ಅಂಗಡಿ ಮಾಲಿಕರಲ್ಲಿ ವಿನಂತಿಸಿ, ಆ ಬಗ್ಗೆ ಹೆಚ್ಚಿನ ತಿಳಿವಳಿಕೆ ಕೊಡುತ್ತಿದ್ದಾರೆ.

ಜನರು ಈ ಬಗ್ಗೆ ಎಚ್ಚರಿಕೆಯಿಂದಿರಬೇಕು. ವೈರಸ್ ಹರಡದಂತೆ ಪ್ರತಿ ಹೆಜ್ಜೆಯಲ್ಲೂ ಗಮನಹರಿಸಬೇಕು. ಪಕ್ಕದ ಮಹಾರಾಷ್ಟ್ರದಲ್ಲಿ ರೋಗ ಹೆಚ್ಚಿರುವುದರಿಂದ ನಾವು ಎಷ್ಟೇ ಜಾಗ್ರತೆ ವಹಿಸಿದರೂ ಕಡಿಮೆಯೇ. ಈ ದಿಸೆಯಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಅವರು ವಿನಂತಿಸಿದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ