Breaking News
Home / ಜಿಲ್ಲೆ / ಬೆಂಗಳೂರು / ಗಂಗಮ್ಮನ ಸಾವು ತೀವ್ರ ನೋವುಂಟುಮಾಡಿದೆ’ : ಮಾಜಿ ಸಿಎಂ ಕುಮಾರಸ್ವಾಮಿ

ಗಂಗಮ್ಮನ ಸಾವು ತೀವ್ರ ನೋವುಂಟುಮಾಡಿದೆ’ : ಮಾಜಿ ಸಿಎಂ ಕುಮಾರಸ್ವಾಮಿ

Spread the love

ಬೆಂಗಳೂರು, ಏ.7-ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಎಂಬುವರು ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟು ಮಾಡಿತು.

ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷಿಕರಿಸುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಗಂಗಮ್ಮ ಪ್ರಕರಣದಲ್ಲಿ ಕೂಲಿ ನೀಡದ ಗುತ್ತಿಗೆದಾರನೊಬ್ಬನದ್ದೇ ತಪ್ಪಿಲ್ಲ. ಸರ್ಕಾರದ್ದೂ ತಪ್ಪಿದೆ

ಕಾರ್ಮಿಕರ ಇಲಾಖೆಯಲ್ಲಿ 8000 ಕೋಟಿ ರೂ ಹಣವಿದೆ. ಆದರೆ ಇಂಥವರಿಗೆ ವಿನಿಯೋಗವಾಗುತ್ತಿಲ್ಲವೇಕೆ? ಆಕೆಯನ್ನು ಬಳ್ಳಾರಿ ಜಿಲ್ಲಾಡಳಿತ ನಿರಾಶ್ರಿತರ ಕ್ಯಾಂಪ್‌ನಲ್ಲಿ ಇರಿಸಿತ್ತಂತೆ. ಕ್ಯಾಂಪ್‌ನಲ್ಲಿದ್ದೂ ಆಕೆಗೆ ಆಹಾರ, ಚಿಕಿತ್ಸೆ ಸಿಗಲಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

ಲಾಕ್‌ಡೌನ್‌ ಮಧ್ಯಮ ವರ್ಗ ಮತ್ತು ಶ್ರೀಮಂತರನ್ನು ಮನೆಯಲ್ಲಿ ಬಂಧಿಸಿಟ್ಟಿರಬಹುದು. ಆದರೆ, ಕೂಲಿ ಕಾರ್ಮಿಕರನ್ನು, ವಲಸಿಗರನ್ನು ಬೀದಿಗೆ ತಳ್ಳಿದೆ. ಸರ್ಕಾರ ಕೂಡಲೇ ಇಂಥವರ ಕಡೆಗೂ ಗಮನ ಹರಿಸಬೇಕು. ದೂರ ದೂರುಗಳಿಗೆ ಹೆಜ್ಜೆ ಹಾಕಿರುವವರ ಬದುಕು ಬವಣೆನ್ನು ನೋಡಬೇಕು. ಮೃತ ಗಂಗಮ್ಮನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವಿದೇಶದಿಂದ ಬಂದ ಸೋಂಕು ಅತ್ತ ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಭಾದಿಸುತ್ತಿದೆ. ಇತ್ತ, ದೇಶದ ಅಭಿವೃದ್ಧಿಗೆ ಹೆಗಲಾದವರು, ದೇಶ ಕಟ್ಟಿದವರು, ಕಟ್ಟುವ ಕೆಲಸಕ್ಕೆ ಮಣ್ಣು, ಕಲ್ಲು, ಇಟ್ಟಿಗೆ ಹೊತ್ತವರು ತಾವು ಮಾಡದ ತಪ್ಪಿಗೆ ಅನ್ನಾಹಾರಗಳಿಲ್ಲದೇ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ